ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್‌ನಿಂದ ಅಹೋರಾತ್ರಿ ಧರಣಿ

ಬೆಂಗಳೂರು: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆಎಸ್ ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ವಿಧಾನಸೌಧದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಮುಂದುವರಿದಿದೆ.
ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್‌ ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಶುಕ್ರವಾರ ಸಂಜೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ರಾಜೀನಾಮೆಯನ್ನು ಅಧಿಕೃತವಾಗಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಆದರೆ ಕೇವಲ ರಾಜೀನಾಮೆ ನೀಡಿದರೆ ಅದು ಮುಗಿಯುವುದಿಲ್ಲ, ಈ ಪ್ರಕರಣದಲ್ಲಿ ಕೆಎಸ್‌ ಈಶ್ವರಪ್ಪ ಅವರನ್ನು ಬಂಧನ ಮಾಡಬೇಕು ಎಂದು ಕಾಂಗ್ರೆಸ್‌ ಒತ್ತಾಯಿಸಿದೆ. ನಿನ್ನೆ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಿಕ್ಕೆ ಮುತ್ತಿಗೆ ಹಾಕಲು ಯತ್ನಿಸಿತ್ತು. ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಿಬೇಕು ಎಂದು ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದಾರೆ.ಈ ನಿಟ್ಟಿನಲ್ಲಿ ಕಾಂಗ್ರೆಸ್‌ ನಡೆಸುತ್ತಿರುವ ಅಹೋರಾತ್ರಿ ಧರಣಿ ಶುಕ್ರವಾರ ಮಧ್ಯಾಹ್ನದ ವರೆಗೂ ಅಂದರೆ 24 ಗಂಟೆಗಳ ಕಾಲ ಧರಣಿ ಮುಂದುವರಿಯಲಿದೆ. ಬಳಿಕ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದು, ಏಳು ತಂಡಗಳಾಗಿ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

ಕೆ.ಎಸ್ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆಗೆ ಶರಣಾಗಿದ್ದು,ಮಂಗಳವಾರ ಮೃತದೇಹ ಉಡುಪಿಯ ಖಾಸಗಿ ಹೋಟೆಲ್‌ನ ಕೋಣೆಯಲ್ಲಿ ಪತ್ತೆಯಾಗಿತ್ತು. ಸಾವಿಗೂ ಮುನ್ನ ಕಳಿಸಿದ್ದ ವಾಟ್ಸಪ್‌ ಸಂದೇಶ ಕಳುಹಿಸಿದ್ದ ತನ್ನ ಸಾವಿಗೆ ಸಚಿವ ಕೆಎಸ್‌ ಈಶ್ವರಪ್ಪನವರೇ ಕಾರಣ ಎಂದು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೆಎಸ್ ಈಶ್ವರಪ್ಪ ಬಂಧಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement