ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಎಸ್‌ ಈಶ್ವರಪ್ಪ

ಬೆಂಗಳೂರು: ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಇಂದು, ಸಂಜೆ ರಾತ್ರಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ನಿನ್ನೆ ನೀಡಿದ್ದ ಹೇಳಿಕೆಯಂತೆ ಶುಕ್ರವಾರ ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾದ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ನಾನು ಆರೋಪಿಯಲ್ಲ ಎಂದು ಹೇಳಿರುವ ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದಾರೆ ಎಂದು ಹೇಳಿದರೂ ಹೈಕಮಾಂಡ್ ಸೂಚನೆಯ ಮೇರೆಗೆ ಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದಾರೆ ಎಂದು ಹೇಳಲಾಗುತ್ತಿದೆ.

ಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಮುನ್ನ, ಈಶ್ವರಪ್ಪ ಸಚಿವರಾಗಿ ಶಿವಮೊಗ್ಗದ ಶುಭಶ್ರೀ ಸಮುದಾಯ ಭವನವನ್ನು ಉದ್ಘಾಟಿಸಿದರು. ಈ ವೇಳೆ ಈಶ್ವರಪ್ಪ ಬೆಂಬಲಿಗರು, ಯಾವುದೇ ಕಾರಣಕ್ಕೂ ನೀವು ರಾಜೀನಾಮೆ ಕೊಡಬಾರದು ಎಂದುಪಟ್ಟು ಹಿಡಿದರು. ಕೆಲವರು ಕಣ್ಣೀರಿಟ್ಟರು. ಆಗ ಈ ಆರೋಪದಿಂದ ಮುಕ್ತನಾಗಿ ಮತ್ತೆ ಸಚಿನಾಗುವೆ ಎಂದು ಬೆಂಬಲಿಗೆ ಭರವಸೆ ನೀಡಿದ ಈಶ್ವರಪ್ಪ ಬೆಂಗಲೂರಿಗೆ ತರಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.ರಾಜೀನಾಮೆ ಬಳಿಕ ಸರ್ಕಾರದ ನೀಡಿದ ಕಾರನ್ನು ಬಿಟ್ಟು ತಮ್ಮ ಕಾರಿನಲ್ಲಿ ಶಿವಮೊಗ್ಗಕ್ಕೆ ಹೊರಟರು.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

ಪಕ್ಷದ ವರಿಷ್ಠರಿಗೆ, ಹಿತೈಷಿಗಳಿಗೆ ಯಾವುದೇ ತೊಂದರೆಯಾಗಬಾರದು ಎಂದು ಬಯಸಿದ್ದೇನೆ.ಹಾಗಾಗಿ ಸಂಜೆ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನಾನು ಕೂಡ ಶುದ್ಧವಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ ಎಂದು ಅವರು ಇದಕ್ಕೂ ಮುಂಚೆ ಶಿವಮೊಗ್ಗದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರು ‘40% ಕಟ್ ಮನಿ ಹಗರಣ’ದಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳ ಬಗೆ ಮಾಡಿದ ಆರೋಪದ ಬಗ್ಗೆ ಉತ್ತರಿಸಿದ ಈಶ್ವರಪ್ಪ, “ಅವರು (ಪ್ರಿಯಾಂಕ ಖರ್ಗೆ) ಈ ಹಗರಣದ ಹಿಂದೆ ಒಬ್ಬರನ್ನೂ ಹೆಸರಿಸುವುದಿಲ್ಲ ಏಕೆ ಎಂದು ಪ್ರಶ್ನಿಸಿದರು.

ಮಂಗಳವಾರ ಉಡುಪಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಗುತ್ತಿಗೆದಾರ ಸಂತೋಷ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಹೊಂದಿದ್ದ ಈಶ್ವರಪ್ಪ ಅವರ ಹೆಸರನ್ನು ತಮ್ಮ ಕೊನೆಯ ಫೋನ್ ಸಂದೇಶಗಳಲ್ಲಿ ಹೆಸರಿಸಿದ್ದಾರೆ ಎಂದು ಆರೋಪಿಸಲಾಗಿದೆ, ತನ್ನ ಸಾವಿಗೆ ಈಶ್ವರಪ್ಪ ಅವರೇ ಹೊಣೆಗಾರರು ಎಂದು ವಾಟ್ಸಪ್‌ ಸಂದೇಶದಲ್ಲಿ ಹೇಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement