ಎಎಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳು: ಜುಲೈ 1 ರಿಂದ ಪಂಜಾಬ್‌ನಲ್ಲಿ 300 ಯೂನಿಟ್ ಉಚಿತ ವಿದ್ಯುತ್ ಘೋಷಣೆ

ಚಂಡೀಗಡ: ಪಂಜಾಬ್‌ ರಾಜ್ಯದಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸರ್ಕಾರವು ಒಂದು ತಿಂಗಳು ಪೂರ್ಣಗೊಂಡ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ಜನರಿಗೆ ಜುಲೈ 1 ರಿಂದ 300 ಯೂನಿಟ್ ಉಚಿತ ವಿದ್ಯುತ್ ಘೋಷಿಸಿದೆ,
ಜಲಂಧರ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾನ್, ‘16ರಂದು ನಾವು ಪಂಜಾಬ್ ಜನತೆಗೆ ಉತ್ತಮ ಸುದ್ದಿ ನೀಡಲಿದ್ದೇವೆ’ ಎಂದರು.

ಪಂಜಾಬ್‌ನಲ್ಲಿ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆ ಕುರಿತು ಚರ್ಚಿಸಲು ಮಾನ್ ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮೂಲಗಳು ತಿಳಿಸಿವೆ.

ಪ್ರತಿ ಮನೆಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸುವುದು ಪಂಜಾಬ್‌ನಲ್ಲಿ ಕಳೆದ ತಿಂಗಳು ಮುಕ್ತಾಯವಾದ ವಿಧಾನಸಭಾ ಚುನಾವಣೆಯಲ್ಲಿ ಎಎಪಿ (AAP) ನೀಡಿದ ಪ್ರಮುಖ ಭರವಸೆಗಳಲ್ಲಿ ಒಂದಾಗಿದೆ.
ಮಾನ್ ಕಳೆದ ತಿಂಗಳು ರಾಜ್ಯದಲ್ಲಿ ಮನೆ ಬಾಗಿಲಿಗೆ ಪಡಿತರ ವಿತರಣಾ ಯೋಜನೆಯನ್ನು ಜಾರಿಗೆ ತಂದರು, ಇದು ಚುನಾವಣೆಯಲ್ಲಿ ಎಎಪಿಯ ಪ್ರಮುಖ ಪ್ರಚಾರ ಕಾರ್ಯಸೂಚಿಯಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement