ಮದ್ಯಪಾನ ಮಾಡಿ ಗುರುದ್ವಾರ ಪ್ರವೇಶ ಮಾಡಿದ್ದಾರೆಂದು ಆರೋಪಿಸಿ ಪಂಜಾಬ್‌ ಸಿಎಂ ವಿರುದ್ಧ ದೂರು ದಾಖಲು

ಚಂಡೀಗಡ: ಮದ್ಯಪಾನ ಮಾಡಿ ಗುರುದ್ವಾರ ಪ್ರವೇಶಿಸಿದ್ದಾರೆ ಎಂದು ಆರೋಪಿಸಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ಧ ದೆಹಲಿ ಬಿಜೆಪಿ ವಕ್ತಾರ ತಜೀಂದರ್ ಪಾಲ್ ಸಿಂಗ್ ಬಗ್ಗಾ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ.

ಗುರುದ್ವಾರವು ಭಕ್ತಿ ಪ್ರಧಾನವಾದ ಸ್ಥಳವಾಗಿದೆ. ಇಲ್ಲಿಗೆ ಮದ್ಯಪಾನ ಮಾಡಿ ಬರುವುದು ಸರಿಯಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿಯಾಗಿ ನಡೆದುಕೊಂಡಿರುವುದು ಶೋಭೆ ತರುವುದಿಲ್ಲ. ಈ ನಿಟ್ಟಿನಲ್ಲಿ ಪಂಜಾಬ್‌ ಮುಖ್ಯಮಂತ್ರಿ ಮಾನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕರಿಗೆ ಅವರು ಮನವಿ ಮಾಡಿದ್ದಾರೆ. ಅಲ್ಲದೆ ತಾವು ದೂರು ನೀಡಿದ ಸ್ಕ್ರೀನ್‌ ಶಾಟ್‌ ಅನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕೆಲವೇ ದಿನಗಳ ಹಿಂದೆ ಏಪ್ರಿಲ್ 14 ರಂದು ದೇಶಾದ್ಯಂತ ಆಚರಿಸಲಾದ ಬೈಸಾಖಿ ಸಂದರ್ಭದಲ್ಲಿ ತಖ್ತ್ ದಮದಾಮಾ ಸಾಹಿಬ್‌ಗೆ ಮದ್ಯಪಾನ ಮಾಡಿ ಪ್ರವೇಶಿಸಿದ್ದಾರೆ ಎಂದು ಶಿರೋಮಣಿ ಗುರುದ್ವಾರ ಪ್ರಬಂಧಕ ಸಮಿತಿ ಆರೋಪಿ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿತ್ತು.

ಓದಿರಿ :-   ಗಾಂಜಾ ಅಮಲಿನಲ್ಲಿ ತನ್ನ ಮರ್ಮಾಂಗವನ್ನೇ ತಾನೇ ಕತ್ತರಿಸಿಕೊಂಡ..! ಧರ್ಮದ ಭಯಕ್ಕೆ ಈ ಕೃತ್ಯ...!

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ