ಸಂತೋಷ ಪಾಟೀಲ ಸಾವಿನ ಪ್ರಕರಣ: ಉಡುಪಿ ಎಸ್ಪಿ ನೇತೃತ್ವದಲ್ಲಿ ತನಿಖೆಗೆ 7 ತಂಡಗಳ ರಚನೆ

posted in: ರಾಜ್ಯ | 0

ಉಡುಪಿ: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ತನಿಖೆಗೆ ಏಳು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ. ನಾನು ಈ ತನಿಖಾ ತಂಡಗಳ ಮೇಲುಸ್ತುವಾರಿಯನ್ನು ವಹಿಸಿಕೊಂಡಿದ್ದೇನೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಎಡಿಜಿಪಿ ಪ್ರತಾಪ್ ರೆಡ್ಡಿ ತಿಳಿಸಿದರು.

ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ ಸಂಬಂಧ ಶನಿವಾರ ಎಸ್‌ಪಿ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಎಸ್‌ಪಿ ಎನ್‌.ವಿಷ್ಣುವರ್ಧನ್‌ ನೇತೃತ್ವದ ತಂಡಗಳು ರಾಜ್ಯದ ವಿವಿಧ ಭಾಗಗಳಿಗೆ ತೆರಳಿ ಸಮಗ್ರವಾಗಿ ತನಿಖೆ ನಡೆಸಲಿವೆ ಎಂದು ತಿಳಿಸಿದರು.

ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷಾ ವರದಿ ಹಾಗೂ ಎಫ್‌ಎಸ್‌ಎಲ್ ವರದಿ ಪಡೆದು ಪರಿಶೀಲಿಸಲಾಗುವುದು. ವಿಧಿವಿಜ್ಞಾನ ಪ್ರಯೋಗಾಲಯವು ಸ್ವತಂತ್ರ ಸಂಸ್ಥೆಯಾಗಿದ್ದು, ಶೀಘ್ರ ವರದಿ ನೀಡುವಂತೆ ಅವರಿಗೆ ಮನವಿ ಮಾಡಲಾಗಿದೆ ಎಂದರು.
ವಿವಿಧ ಜಿಲ್ಲೆಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಸಮಗ್ರ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಎಡಿಜಿಪಿ ಪ್ರತಾಪ್ ರೆಡ್ಡಿ ತಿಳಿಸಿದರು.

advertisement

ನಿಮ್ಮ ಕಾಮೆಂಟ್ ಬರೆಯಿರಿ