ಜೆಡಿಎಸ್‌ ನೂತನ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕಾರ

ಬೆಂಗಳೂರು: ಜೆಡಿಎಸ್‌ಗೆ ಅಧಿಕೃತವಾಗಿ ಪಾದಾರ್ಪಣೆ ಮಾಡಿದ ಸಿ.ಎಂ. ಇಬ್ರಾಹಿಂ ಭಾನುವಾರ ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅವರು ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಬಳಿಕ ಹಾಲಿ ಅಧ್ಯಕ್ಷ ಎಚ್. ಕೆ. ಕುಮಾರಸ್ವಾಮಿಯವರು ಪಕ್ಷದ ಧ್ವಜ ನೀಡಿ ರಾಜ್ಯಾಧ್ಯಕ್ಷರ ಅಧಿಕಾರ ಹಸ್ತಾಂತರಿಸಿದರು.

ಮಾಜಿ ಪ್ರಧಾನಿ, ಪಕ್ಷ ವರಿಷ್ಠ ಹೆಚ್.ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಪಕ್ಷದ ಧ್ವಜ, ಪಕ್ಷದ ಶಾಲು ಹಾಕಿ ಅಧಿಕಾರ ನೀಡಿದರು. ಇಂದು ಬೆಳಗ್ಗೆ 11 ಗಂಟೆ ಸಮಯ ನೋಡಿ ಹೆಚ್‍ಡಿಡಿ ಅಧಿಕಾರ ಹಸ್ತಾಂತರ ಮಾಡಿದರು. ಇದೇವೇಳೆ ಎಚ್.ಕೆ ಕುಮಾರಸ್ವಾಮಿ ಅವರು ಜೆಡಿಎಸ್ ಸಂಸದೀಯ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.

ಬಳಿಕ ಮಾತನಾಡಿದ ಹೆಚ್‍ಡಿ ಕುಮರಸ್ವಾಮಿ, ರಾಜಕೀಯದ ಬೆಳವಣಿಗೆ ಹಿನ್ನೆಲೆಯಲ್ಲಿ ಇಬ್ರಾಹಿಂ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದೇವೆ. ಎಲ್ಲರೂ ಚರ್ಚೆ ಮಾಡಿಯೇ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ ಎಂದರು.
ಎಚ್.ಕೆ ಕುಮಾರಸ್ವಾಮಿ ಮಾತನಾಡಿ, ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ನನ್ನನ್ನು ಗುರುತಿಸಿ, ಬೆಳೆಸಿದ ಪಕ್ಷಕ್ಕೆ ಎಂದೆಂದೂ ಚಿರಋಣಿಯಾಗಿರುತ್ತೇನೆ. ಅಧ್ಯಕ್ಷ ಸ್ಥಾನದಿಂದ ಖುಷಿಯಿಂದಲೇ ನಿರ್ಗಮಿಸಿ ಹೊಸ ಜವಾಬ್ದಾರಿ ನಿಭಾಯಿಸಲು ಮುಂದಾಗಿದ್ದೇನೆ ಎಂದರು.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement