ದ್ವಿತೀಯ ಪಿಯು ಪರೀಕ್ಷೆ‌ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ

ಬೆಂಗಳೂರು: ಏಪ್ರಿಲ್‌ 22ರಿಂದ ಆರಂಭವಾಗುವ ದ್ವಿತೀಯ ಪಿಯು ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು ಹಾಗೂ ಬರೆದು ವಾಪಸ್ ಬರಲು ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ ಸೌಲಭ್ಯ ನೀಡಲಾಗಿದೆ.
ಈ ಕುರಿತು ಕೆಎಸ್ಆರ್‌ಟಿಸಿ ಪತ್ರಿಕಾ ಪ್ರಕಟಣೆ ನೀಡಿದ್ದು, ಏಪ್ರಿಲ್‌ 22ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷೆಗಾಗಿ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುಲು ಅನುಮತಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕೋರಿದೆ.

ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕ 22-04-2022 ರಿಂದ 18-05-2022ರ ವರೆಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು, ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದ ವರೆಗೆ ಹೋಗಲು ಹಾಗೂ ಪರೀಕ್ಷೆ ಬರೆದು ಪುನಃ ಹಿಂದಿರುಗಲು ನಿಗಮದ ನಗರ, ಹೊವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕೆಎಸ್ಆರ್‌ಟಿಸಿ ಬಸ್ ಗಳಲ್ಲಿ ತೆರಳುವಾಗ ನಿರ್ವಾಹಕರಿಗೆ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತ ಬಸ್‌ ಸೌಲಭ್ಯದ ಪಡೆದುಕೊಳ್ಳಲು ತಿಳಿಸಲಾಗಿದೆ. ಅಲ್ಲದೆ ಬಸ್‌ ತೆರಳುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ ವಿದ್ಯಾರ್ಥಿಗಳು ಬಸ್‌ ಹತ್ತಲು, ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಬೇಕು ಎಂದು ಸಹ ಸೂಚಿಸಲಾಗಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement