ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ, 40 ಮಂದಿ ಬಂಧನ, 12 ಪೊಲೀಸರಿಗೆ ಗಾಯ

ಹುಬ್ಬಳ್ಳಿ: ಪೊಲೀಸ್ ಠಾಣೆ ಹಾಗೂ ಸಾರ್ವಜನಿಕ ಕಟ್ಟಡಗಳ ಮೇಲೆ ಕಲ್ಲು ತೂರಾಟ ನಡೆಸಿ ಏಳು ವಾಹನಗಳಿಗೆ ಹಾನಿ ಮಾಡಿದ ಆರೋಪದ ಮೇಲೆ 40 ಜನರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಲ್ಲು ತೂರಾಟದ ಘಟನೆಯಲ್ಲಿ ಒಟ್ಟು 12 ಪೊಲೀಸರು ಗಾಯಗೊಂಡಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುಬ್ಬಳ್ಳಿಯ ಆನಂದನಗರ ನಿವಾಸಿ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ ನಂತರ ಹಿನ್ನೆಲೆಯಲ್ಲಿ ಶನಿವಾರ ತಡರಾತ್ರಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಯಿತು. ಆರೋಪಿಗಳು ಕೇಸರಿ ಧ್ವಜವಿರುವ ಮಸೀದಿಯ ಚಿತ್ರವನ್ನು ಪೋಸ್ಟ್ ಮಾಡಿದ್ದು, ಹಳೇ ಹುಬ್ಬಳ್ಳಿ ಭಾಗದಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು.

ಪೋಸ್ಟ್ ವೈರಲ್ ಆದ ನಂತರ ಮುಸ್ಲಿಂ ಸಂಘಟನೆಯೊಂದು ಹಳೇ ಹುಬ್ಬಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದೆ. ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಆರೋಪಿ ಹಿರೇಮಠ ಎಂಬಾತನ್ನು ಬಂಧಿಸಿದರಾದರೂ, ಆರೋಪಿಗಳನ್ನು ತಮಗೆ ಒಪ್ಪಿಸುವಂತೆ ಪಟ್ಟು ನೂರಾರು ಜನರು ಠಾಣೆ ಎದುರು ಜಮಾಯಿಸಿದ್ದರು.
ಹಿಂಸಾತ್ಮಕ ಪ್ರತಿಭಟನೆಯ ನಂತರ, ಪೊಲೀಸ್ ಠಾಣೆ, ವಾಹನಗಳು, ಆಸ್ಪತ್ರೆ ಮತ್ತು ದೇವಸ್ಥಾನಕ್ಕೆ ಕಲ್ಲುಗಳನ್ನು ತೂರಿದ ಪ್ರತಿಭಟನಾಕಾರರ ಮೇಲೆ ಪೊಲೀಸರುಕಿಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಾರಂಭಿಸಿದರು. ಬಂಧಿತರ ಪೋಷಕರು ಮತ್ತು ಸಂಬಂಧಿಕರು ಜಮಾಯಿಸಿ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ನಂತರ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಎಲ್ಲಾ 40 ಬಂಧಿತರನ್ನು ಈಗ ವಿವಿಧ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹುಬ್ಬಳ್ಳಿ ಪೊಲೀಸ್ ಆಯುಕ್ತ ಲಾಭು ರಾಮ್ ತಿಳಿಸಿದ್ದಾರೆ. “ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಇಷ್ಟು ದೊಡ್ಡ ಪ್ರಮಾಣದ ಕಲ್ಲುಗಳನ್ನು ಹೇಗೆ ಸಂಗ್ರಹಿಸಲಾಗಿದೆ ಎಂಬುದನ್ನೂ ನಾವು ತನಿಖೆ ಮಾಡುತ್ತಿದ್ದೇವೆ. ಪ್ರಕರಣದಲ್ಲಿ ಇನ್ನೂ ಹಲವರ ಬಂಧನವಾಗಬಹುದು. ಖಾಸಗಿ ಮತ್ತು ಸಾರ್ವಜನಿಕ ವಾಹನಗಳಿಗೆ ಹಾನಿ ಮತ್ತು ಸಾರ್ವಜನಿಕರಿಗೆ ಗಾಯಗಲಾದ ಬಗ್ಗೆಯೂ ಸುದ್ದಿಗಳಿವೆ. ಯಾವುದೇ ದೂರುಗಳಿದ್ದರೆ ಅಲ್ಲಿ ಅವರು ಹತ್ತಿರದ ಪೊಲೀಸ್ ಠಾಣೆಗೆ ವರದಿ ಮಾಡಬೇಕು ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ.

ಇಡೀ ಹುಬ್ಬಳ್ಳಿ ನಗರಕ್ಕೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಭದ್ರತೆಗಾಗಿ ಇತರ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ್ ಪಡೆ ಆಗಮಿಸಿದೆ ಎಂದು ಲಾಭು ರಾಮ್ ಹೇಳಿದರು.
ಇದೇ ವೇಳೆ ಹುಬ್ಬಳ್ಳಿ ಹಿಂಸಾಚಾರ ಘಟನೆಯನ್ನು ಖಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಘಟನೆಯನ್ನು ರಾಜಕೀಯಗೊಳಿಸಲು ಸರ್ಕಾರ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಪ್ರತಿಭಟನಾಕಾರರು ಎಸೆದ ದೊಡ್ಡ ಪ್ರಮಾಣದ ಕಲ್ಲುಗಳನ್ನು ಸಂಗ್ರಹಿಸುವ ಬಗ್ಗೆ ಮಾಹಿತಿ ಸಿಕ್ಕಿದೆ. “ಇದು ಬೆಂಗಳೂರಿನಲ್ಲಿ ವರದಿಯಾದ ಡಿಜೆ ಹಳ್ಳಿ ಘಟನೆಯ ರೀತಿಯ ಪ್ರಕರಣವಾಗಿದೆ, ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ ಮತ್ತು ಶಾಂತಿ ಕದಡುವವರನ್ನು ಬಂಧಿಸಲಾಗುವುದು” ಎಂದು ಅವರು ಎಚ್ಚರಿಸಿದ್ದಾರೆ.

ಪ್ರಮುಖ ಸುದ್ದಿ :-   ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement