ಪ್ರಚೋದನಕಾರಿ ಭಾಷಣ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಯಚೂರು: ಲವ್ ಕೇಸರಿ ವಿವಾದ ಹಾಗೂ ಪ್ರಚೋದನಕಾರಿ ಭಾಷಣ ಪ್ರಕರಣದ ಆರೋಪದ ಮೇಲೆ ಶ್ರೀರಾಮಸೇನೆ ಜಿಲ್ಲಾ ಸಂಚಾಲಕ ರಾಜಾಚಂದ್ರ ರಾಮನಗೌಡ ಹಾಗೂ ಜಿಲ್ಲಾಧ್ಯಕ್ಷ ಮಂಜುನಾಥ್ ಬಾವಿಯನ್ನು ನಗರದ ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಏಪ್ರಿಲ್ 10ರಂದು ಶ್ರೀರಾಮನವಮಿ ಹಿನ್ನೆಲೆ ಶ್ರೀರಾಮಸೇನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರು ಹಾಗೂ “ಲವ್ ಕೇಸರಿ” ಟ್ರೆಂಡ್ ಸೃಷ್ಟಿಸಲು ಶ್ರೀರಾಮಸೇನೆ ಕರೆ ನೀಡಿದ್ದರು ಎಂದು ಆರೋಪಿಸಲಾಗಿದೆ. ವೇದಿಕೆ ಮೇಲೆ ಖಡ್ಗ ಹಿಡಿದು ಯುವಕರನ್ನು ಪ್ರಚೋದನೆ ಮಾಡಿದ್ದ ಆರೋಪದಲ್ಲಿ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮಣಿಕಾಂತ್ ಎಂಬುವವರು ಮತೀಯ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ರೀತಿಯಲ್ಲಿ ಭಾಷಣ ಮಾಡಿ, ಅನ್ಯ ಧರ್ಮೀಯರಲ್ಲಿ ಭಯ ಸೃಷ್ಟಿಸುವ ಕಾರ್ಯಕ್ರಮ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಗೋವಾದಲ್ಲಿ ಆರೋಪಿಗಳನ್ನು ಬಂಧಿಸಿದ್ದು ಅವರಿಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಆರೋಪಿಗಳ ವೈದ್ಯಕೀಯ ತಪಾಸಣೆ ಹಾಗೂ ವಿಚಾರಣೆ ನಂತರ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಪ್ರಮುಖ ಸುದ್ದಿ :-   ಆದಿತ್ಯ ಎಲ್‌1, ಪ್ರೋಬಾ-3 ಉಪಗ್ರಹಗಳ ನೆರವಿನಿಂದ ಸೌರ ಸ್ಫೋಟಗಳ ರಹಸ್ಯ ಬಯಲು ಮಾಡಿದ ವಿಜ್ಞಾನಿಗಳು

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement