ಭೂ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡ ಮೊದಲ ಇಂಜಿನಿಯರ್ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ಭೂಸೇನೆಯ ನೂತನ ಮುಖ್ಯಸ್ಥರಾಗಿ ಲೆ.ಜ. ಮನೋಜ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ.
ಹಾಲಿ ಭೂಸೇನೆ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅವರ ಸೇವಾವಧಿ ಏ.30ರಂದು ಜನರಲ್ ನರವಣೆ ನಿವೃತ್ತಿಯಾಗಲಿದ್ದು, ಅದೇ ದಿನ ಲೆ.ಜ. ಮನೋಜ್ ಪಾಂಡೆ ಭೂಸೇನೆಉ ನೂತನ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ.

ಭೂ ಸೇನೆಯ ಎಂಜಿನಿಯರ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಲೆ.ಜ. ಮನೋಜ್ ಪಾಂಡೆ, ಭಾರತೀಯ ಭೂಸೇನೆ ಮುಖ್ಯಸ್ಥರ ಹುದ್ದೆಗೆ ಏರಿದ ಮೊಟ್ಟ ಮೊದಲ ಎಂಜಿನಿಯರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಭೂಸೇನೆಯ 117 ಎಂಜಿನಿಯರ್ ರೆಜಿಮೆಂಟ್‌ ಅನ್ನು ಮುನ್ನಡೆಸಿದ ಅನುಭವ ಹೊಂದಿರುವ ಲೆ.ಜ. ಮನೋಜ್ ಪಾಂಡೆ, ಭೂಸೇನೆಯ ಪೂರ್ವ ಕಮಾಂಡ್‌ನ ಮುಖ್ಯಸ್ಥರಾಗಿಯೂ ಲೆ.ಜ. ಮನೋಜ್ ಪಾಂಡೆ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಭಾರತೀಯ ಭೂಸೇನೆ ಉಪ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಬಲವಂತದ ಮತಾಂತರ: ಸಿಬಿಐ-ಎನ್‌ಐಎ ತನಿಖೆಗೆ ಕೋಲ್ಕತ್ತಾ ಹೈಕೋರ್ಟ್ ಆದೇಶ
advertisement

ನಿಮ್ಮ ಕಾಮೆಂಟ್ ಬರೆಯಿರಿ