ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆ : ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿ ಮತ್ತು ದಕ್ಷಿಣ ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯಿಂದಾಗಿ ಮುಂದಿನ ಮೂರು ದಿನ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಇತರೆ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಮೈಸೂರು, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಏಪ್ರಿಲ್ 19 ಮತ್ತು 20ರಂದು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಹಾಗೂ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಇಂದಿನಿಂದ ಏಪ್ರಿಲ್ 21ರ ವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಧಾರವಾಡ, ಬಾಗಲಕೋಟೆ, ಹಾವೇರಿ, ಗದಗ, ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಇಂದು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆ ಬಳಿಕ ಮುಂದಿನ ಮೂರು ದಿನ ಕೂಡ ಸಾಧಾರಣ ಮಳೆಯಾಗಲಿದೆ ಎಂದು ಅದು ತಿಳಿಸಿದೆ.

ಪ್ರಮುಖ ಸುದ್ದಿ :-   ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement