ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ವಿಶೇಷ ಸಭೆ : ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನವದೆಹಲಿಯಲ್ಲಿ ವಿಶೇಷ ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬಗ್ಗೆ ಅಲ್ಲಿಯೇ ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರ್ನಾಟಕದ ಬಗ್ಗೆ ದೆಹಲಿಯಲ್ಲಿ ವಿಶೇಷ ಸಭೆ‌ ನಡೆಸುವುದಾಗಿ ಅವರು ಹೇಳಿದ್ದಾರೆ. ಆ ಸಭೆಯ ನಂತರ ಮಾಹಿತಿ ನೀಡುವುದಾಗಿ ತಿಳಿಸಿದ್ದು, ಆ ನಂತರ ದೆಹಲಿಗೆ ಬರುವಂತೆ ನಡ್ಡಾ ಹೇಳಿದ್ದಾರೆ. ನಂತರ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬಗ್ಗೆ ಅಲ್ಲಿಯೇ ತೀರ್ಮಾನವಾಗಲಿದೆ ಎಂದು ಅವರು ಹೇಳಿದರು.

ಹುಬ್ಬಳ್ಳಿ ಘಟನೆ..
ಹುಬ್ಬಳ್ಳಿ ಘಟನೆಗೆ ಸಂಬಂಧಿಸಿದಂತೆ ಬಹುತೇಕ ಎಲ್ಲರನ್ನೂ ಬಂಧಿಸಲಾಗಿದ್ದು, ಅದರ ಹಿಂದಿರುವ ನಾಯಕರ ತನಿಖೆಯಾಗಿ ತಪ್ಪಿತಸ್ಥರ ವಿರುದ್ಧ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.
ಪಿ.ಎಸ್.ಐ ಪರೀಕ್ಷೆಯಲ್ಲಿ ಅಕ್ರಮವಾಗಿರುವ ಕುರಿತು ಗೃಹ ಸಚಿವರ ಗಮನಕ್ಕೆ ಬಂದ ಕೂಡಲೇ ನಿಷ್ಪಕ್ಷಪಾತ ತನಿಖೆಯಾಗಲು ಸಿಐಡಿಗೆ ವಹಿಸಲಾಗಿದ್ದು, ಪರೀಕ್ಷೆಯಾಗಿರುವ ಕೇಂದ್ರದಲ್ಲಿ ಸಮಸ್ಯೆಯಾಗಿದ್ದರೆ, ಅಧೀಕ್ಷಕರ ಮಟ್ಟದಲ್ಲಿ ಸಮಸ್ಯೆ ಅಥವಾ ಮೇಲಾಧಿಕಾರಿಗಳ ಸಮಸ್ಯೆ ಇದ್ದರೆ ಸಮಗ್ರವಾಗಿ ತನಿಖೆ ಮಾಡಲು ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement