ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಆಶಿಶ್ ಮಿಶ್ರಾ ಜಾಮೀನು ರದ್ದುಪಡಿಸಿದ ಸುಪ್ರೀಂಕೋರ್ಟ್

ನವದೆಹಲಿ; ಲಖೀಂಪುರ ಖೇರಿ ಗಲಭೆ ಪ್ರಕರಣದಲ್ಲಿ ಆಶಿಷ್‌ ಮಿಶ್ರಾ ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ ನೀಡಿದೆ.

ಆಶಿಷ್‌ ಮಿಶ್ರಾಗೆ ಫೆಬ್ರವರಿಯಲ್ಲಿ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿತ್ತು.
ಆಶೀಷ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಫೆಬ್ರುವರಿ 10ರಂದು ಜಾಮೀನು ಮಂಜೂರು ಮಾಡಿತ್ತು ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ಸೋಮವಾರ ರದ್ದುಪಡಿಸಿದೆ. ಅಲ್ಲದೆ, ಒಂದು ವಾರದೊಳಗೆ ಶರಣಾಗಬೇಕು ಎಂದು ಸೂಚನೆ ನೀಡಿದೆ.

ಆಶಿಷ್‌ ಮಿಶ್ರಾಗೆ ಜಾಮೀನು ನೀಡಿರುವುದನ್ನು ಲಖೀಂಪುರ ಖೇರಿ ಗಲಭೆಯಲ್ಲಿ ಮೃತಪಟ್ಟ ರೈತರ ಕುಟುಂಬದವರು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು. ಮಿಶ್ರಾಗೆ ಜಾಮೀನು ರದ್ದು ಕೋರಿ ರೈತರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಏಪ್ರಿಲ್ 4ರಂದು ತನ್ನ ಆದೇಶವನ್ನು ಕಾಯ್ದಿರಿಸಿತ್ತು. 2021ರ ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಗಲಭೆ ನಡೆದಿತ್ತು. ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹತ್ತಿಸಲಾಗಿತ್ತು. ಆಶಿಷ್‌ ಮಿಶ್ರಾ ಈ ಪ್ರಕರಣದಲ್ಲಿ ಆರೋಪಿ.

ಸೋಮವಾರ ಜಾಮೀನು ರದ್ದುಗೊಳಿಸಿರುವ ಸುಪ್ರೀಂಕೋರ್ಟ್ ತನ್ನ ಆದೇಶ ನೀಡುವಾಗ ಹೈಕೋರ್ಟ್ ಅನಗತ್ಯ ಅಂಶಗಳನ್ನು ಪರಿಗಣಿಸಿದೆ ಎಂದು ಹೇಳಿದೆ ಮತ್ತು ಆಶಿಷ್ ಮಿಶ್ರಾ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಪ್ರಮುಖ ಸುದ್ದಿ :-   ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್‌ ನಟ ಗೋವಿಂದ : 14 ವರ್ಷಗಳ ವನವಾಸದ ನಂತರ ರಾಜಕೀಯಕ್ಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement