ಮಂಗಳೂರು: ಬಜ್ಪೆಯಲ್ಲಿರುವ ಮಂಗಳೂರು ವಿಶೇಷ ಆರ್ಥಿಕ ವಲಯದ ಮೀನಿನ ಫ್ಯಾಕ್ಟರಿಯೊಂದರಲ್ಲಿ ದುರಂತ ಸಂಭವಿಸಿದ್ದು, ಐವರು ಮೃತಪಟ್ಟಿದ್ದು, ಮೂವರು ಅಸ್ವಸ್ಥಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಹಲವೆಡೆಗಳಿಂದ ಬರುವ ಮೀನು ಶುದ್ದೀಕರಿಸುವ ಬೃಹತ್ ಟ್ಯಾಂಕಿಗೆ ಇಳಿದ ಬಂಗಾಳದ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು 8 ಕಾರ್ಮಿಕರು ಹೋಗಿದ್ದಾರೆ. ಈ ವೇಳೆ ಅವರು ಕೂಡ ಅಸ್ವಸ್ಥಗೊಂಡು, ಉಸಿರಾಟದಲ್ಲಿ ಏರುಪೇರಾಗಿದೆ. ಅಸ್ವಸ್ಥಗೊಂಡವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರಲ್ಲಿ ಐವರು ಮೃತಪಟ್ಟಿದ್ದಾರೆ. 5 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಭಾನುವಾರ ರಾತ್ರಿ ಮೂವರು ಮೃತಪಟ್ಟಿದ್ದು, ಇಂದು ಸೋಮವಾರ ಮತ್ತಿಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಮೃತಪಟ್ಟ ಕಾರ್ಮಿಕರನ್ನು ಪಶ್ಚಿಮ ಬಂಗಾಳ ಮೂಲದ ಸಮೀರುಲ್ಲಾ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್, ಮಿರಾಜುಲ್ಲ್ ಇಸ್ಲಾಂ, ಶಾರಾಫತ್ ಅಲಿ ಎಂದು ಎಂದು ಗುರುತಿಸಲಾಗಿದೆ. ಅಸ್ವಸ್ಥಗೊಂಡ ಅಜನ್ ಆಲಿ, ಕರೀಬುಲ್ಲ, ಅಫ್ತಲ್ ಮಲ್ಲಿಕ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಎಂದಿನಂತೆ ಮೀನು ಶುದ್ದೀಕರಣಗೊಳಿಸುವ ಟ್ಯಾಂಕಿಗೆ ಇಳಿದ 8 ಮಂದಿ ಕಾರ್ಮಿಕರು ಸ್ವಚ್ಛಗೊಳಿಸಿದ ಮೀನನ್ನು ತೆಗೆಯುವ ಸಂದರ್ಭ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು , ಮೀನು ಸಂಸ್ಕರಣ ಫ್ಯಾಕ್ಟರಿಯನ್ನು ಇದೀಗ ಬಂದ್ ಮಾಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ