ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ ನಿವಾಸಕ್ಕೆ ತೆರಳಿ 11 ಲಕ್ಷ ರೂ. ಚೆಕ್‌ ನೀಡಿದ ಡಿಕೆಶಿ

posted in: ರಾಜ್ಯ | 0

ಬೆಳಗಾವಿ: ಉಡುಪಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ ಪಾಟೀಲ ಅವರ ಬೆಳಗಾವಿ ತಾಲೂಕಿನ ಬಡಸ ಗ್ರಾಮದ ನಿವಾಸಕ್ಕೆ ಮಂಗಳವಾರ ಭೇಟಿ ಕೊಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಸಂತೋಷ ಪಾಟೀಲ ಅವರ ಪತ್ನಿಗೆ ಕೆಪಿಸಿಸಿ ವತಿಯಿಂದ 11 ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಿಸಿದರು.
ಸಂತೋಷ ಪಾಟೀಲ ಅವರು ಆತ್ಮಹತ್ಯೆ ಮಾಡಿಕೊಂಡ ನಂತರ ಅವರ ನಿವಾಸಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಿಯೋಗದಲ್ಲಿದ್ದ ಡಿ. ಕೆ. ಶಿವಕುಮಾರ್ ಅವರು 11 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇಂದು ಬೆಳಗಾವಿಗೆ ತೆರಳಿ ಪರಿಹಾರ ನೀಡಿದ್ದಾರೆ.
ಇದಲ್ಲದೆ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ ಅವರು ವೈಯಕ್ತಿಕವಾಗಿ 5 ಲಕ್ಷ ರೂ.ಗಳ. ಪರಿಹಾರ ಚೆಕ್ ನೀಡಿದರು.
ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ, ಅಂಜಲಿ ನಿಂಬಾಳ್ಕರ, ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನವಲಗಟ್ಟಿ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಧಾರವಾಡದ ಅಪಘಾತದಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿಕೆ : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
advertisement

ನಿಮ್ಮ ಕಾಮೆಂಟ್ ಬರೆಯಿರಿ