ಕರ್ನಾಟಕದಲ್ಲಿ ವಾರಾಂತ್ಯದಲ್ಲಿ ಮಳೆ ಪ್ರಮಾಣದಲ್ಲಿ ಏರಿಕೆ: ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ವಾರಾಂತ್ಯದಲ್ಲಿ ಮಳೆ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆಯ ತಜ್ಞ ಸದಾನಂದ ಅಡಿಗ ಹೇಳಿದ್ದಾರೆ. ಮೇಲ್ಮೈ ಸುಳಿಗಾಳಿ ದಕ್ಷಿಣ ತಮಿಳುನಾಡು ಪ್ರದೇಶದಲ್ಲಿದೆ. ಟ್ರಫ್ ತೆಲಂಗಾಣದಿಂದ ದಕ್ಷಿಣ ತಮಿಳುನಾಡು ಕಡೆಗೆ ಸಾಗಿದೆ. ನಿನ್ನೆವರೆಗೂ ಇದ್ದ ಅರಬ್ಬೀ ಸಮುದ್ರದ ಮೇಲ್ಮೈ ಸುಳಿಗಾಳಿ ದುರ್ಬಲಗೊಂಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕರಾವಳಿಯಲ್ಲಿ ಏಪ್ರಿಲ್ 21ರ ವರೆಗೂ ಮಳೆ ಇರಲಿದೆ. ಏಪ್ರಿಲ್‌ 22 ಹಾಗೂ 23ರಂದು ಮಳೆ ಪ್ರಮಾಣದಲ್ಲಿ ಏರಿಕೆ ಕಂಡು ಬರಲಿದೆ. ನಾಳೆಗೆ ಸಿಡಿಲು, ಗುಡುಗಿನ ಮುನ್ನೆಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನಲ್ಲಿ ಮುಂದಿನ ಐದು ದಿನ ಕೆಲವೆಡೆ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿಯೂ ಮಳೆ ಮುಂದುವರಿಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಾಲ್ಮೀಕಿ ಹಗರಣ | ರಾಜ್ಯ ಸರ್ಕಾರಕ್ಕೆ ಹಿನ್ನಡೆ, ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ; ಹಲವರಿಗೆ ಶುರುವಾಯ್ತು ಢವ ಢವ

ನಿಮ್ಮ ಕಾಮೆಂಟ್ ಬರೆಯಿರಿ

advertisement