ರಾಗಿ ಬೆಳೆಗಾರರಿಗೆ ಸಿಹಿಸುದ್ದಿ: ಹೆಚ್ಚುವರಿಯಾಗಿ 1.14 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ರಾಜ್ಯ ಸರ್ಕಾರದ ನಿರ್ಧಾರ

ಬೆಂಗಳೂರು : ರಾಗಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಹೆಚ್ಚುವರಿಯಾಗಿ ರಾಗಿ ಖರೀದಿಗೆ ಮುಂದಾಗಿದೆ. ಬೆಂಬಲ ಬೆಲೆಯಡಿ 1.14 ಲಕ್ಷ ಮೆ. ಟನ್‌ ರಾಗಿಯನ್ನು ಹೆಚ್ಚುವರಿಯಾಗಿ ಖರೀದಿಸಲು ಸಂಪುಟ ಉಪ ಸಮಿತಿ ತೀರ್ಮಾನಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಂಪುಟ ಉಪ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕನಿಷ್ಠ ಬೆಂಬಲ ಯೋಜನೆಯಡಿ ಸರ್ಕಾರ ಹೆಚ್ಚುವರಿಯಾಗಿ 1.14 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆಯ ಬಳಿಕ ತಿಳಿಸಿದರು.

ಹಾಸನ, ಚಿಕ್ಕಮಗಳೂರು, ಕೋಲಾರ, ಚಿಕ್ಕ ಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಸೇರಿ ಕೆಲವು ಜಿಲ್ಲೆಗಳಲ್ಲಿ ರಾಗಿ ಖರೀದಿಗೆ ಆಗ್ರಹ ಮಾಡಲಾಗಿತ್ತು. ರಾಗಿ ಖರೀದಿ ಮಾಡಬೇಕೆಂಬ ರೈತರ ಬೇಡಿಕೆಯ ಮೇರೆಗೆ ಈಗಾಗಲೇ 2.1 ಲಕ್ಷ ಟನ್ ರಾಗಿ ಖರೀದಿ ಮಾಡಲಾಗಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ 1.14 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಲು ತೀರ್ಮಾನಿಸಲಾಗಿದೆ. ಇದಕ್ಕೆ ಒಟ್ಟು 487 ಕೋಟಿ ರೂ.ಗಳ ವೆಚ್ಚವಾಗಲಿದೆ’ ಎಂದರು.

ಪ್ರಮುಖ ಸುದ್ದಿ :-   ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ 4 ತಾಲೂಕುಗಳ ಶಾಲೆಗಳಿಗೆ ನಾಳೆ (ಜುಲೈ 4)ರಜೆ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement