ದಲಿತ ಅಪ್ರಾಪ್ತ ವಿದ್ಯಾರ್ಥಿಗೆ ಥಳಿಸಿ, ಕಾಲು ನೆಕ್ಕಿಸಿದರು…! ವೀಡಿಯೊ ವೈರಲ್‌ ಆದ ನಂತರ ಏಳು ಮಂದಿ ಬಂಧನ

ಆಘಾತಕಾರಿ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಿದ ಕೆಲವರು ಅಪ್ರಾಪ್ತ ಬಾಲಕನಿಂದ ತಮ್ಮ ಪಾದಗಳನ್ನು ನೆಕ್ಕಿಸಿದ್ದಾರೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಏಳು ಮಂದಿಯನ್ನು ಬಂಧಿಸಲಾಗಿದೆ. 10ನೇ ತರಗತಿಯ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ ಕಾಲು ನೆಕ್ಕುವಂತೆ ಮಾಡಿರುವುದನ್ನು ವೀಡಿಯೊ ತೋರಿಸಿದೆ.

ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ತಕ್ಷಣ, ಜಿಲ್ಲಾ ಪೊಲೀಸ್ ಮುಖ್ಯಸ್ಥರು ಕಾರ್ಯಾಚರಣೆಗೆ ಇಳಿದರು ಮತ್ತು ಐದು ತಂಡಗಳನ್ನು ಸ್ಥಾಪಿಸಿದರು.ರಾಯ್ ಬರೇಲಿ ಪೊಲೀಸ್ ವರಿಷ್ಠಾಧಿಕಾರಿ ಶ್ಲೋಕ್ ಕುಮಾರ್ ಹೇಳಿಕೆ ನೀಡಿದ್ದು, ಪ್ರಕರಣದ ಪ್ರಮುಖ ಆರೋಪಿ ಅಪ್ರಾಪ್ತ ವಯಸ್ಕನಾಗಿದ್ದು, ಆರು ಮಂದಿಯನ್ನು ಅಭಿಷೇಕ್, ವಿಕಾಸ್ ಪಾಸಿ, ಮಹೇಂದ್ರ ಕುಮಾರ್, ಹೃತಿಕ್ ಸಿಂಗ್, ಅಮನ್ ಸಿಂಗ್ ಹಾಗೂ ಎಂದು ಯಶ್ ಪ್ರತಾಪ್ ವಯಸ್ಕರಾಗಿದ್ದು ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

https://twitter.com/SurajKrBauddh/status/1515701651868614657?ref_src=twsrc%5Etfw%7Ctwcamp%5Etweetembed%7Ctwterm%5E1515701651868614657%7Ctwgr%5E%7Ctwcon%5Es1_&ref_url=https%3A%2F%2Fwww.freepressjournal.in%2Findia%2Fafter-viral-video-7-arrested-for-making-class-10-uttar-pradesh-student-lick-feet

ಅದೇ ಶಾಲೆಯಲ್ಲಿ ತೇರ್ಗಡೆಯಾಗಿರುವ ಹಿರಿಯರ ಸುಲಿಗೆ ಕರೆಗೆ ಮಣಿಯಲು ಸಿದ್ಧನಿಲ್ಲದ ಕಾರಣ 10ನೇ ತರಗತಿಯ ಈ ಬಾಲಕನನ್ನು ಚಿತ್ರಹಿಂಸೆ ಮತ್ತು ಅಮಾನವೀಯ ವರ್ತನೆಗೆ ಒಳಪಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸ್ಕೂಟಿ ಮೇಲೆ ಹತ್ತಿದ ಬ್ಯಾಲೆನ್ಸ್ ತಪ್ಪಿ ಹಿಂದೆ ಬರುತ್ತಿದ್ದ ಟ್ರಕ್ ; ಮುಂದೇನಾಯ್ತೆಂದರೆ...

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement