ಪ್ರಾಧ್ಯಾಪಕಿ ವಿರುದ್ಧ ಮಾನಹಾನಿಕರ ಪೋಸ್ಟರ್‌ ಅಂಟಿಸಿ ಕಿರುಕುಳ: ಕಾಲೇಜು ಸಂಚಾಲಕ, ಇಬ್ಬರು ಪ್ರಾಧ್ಯಾಪಕರ ಬಂಧನ

ಮಂಗಳೂರು: ಕಾಲೇಜಿನ ಪ್ರಾಧ್ಯಾಪಕಿಯೊಬ್ಬರ ಕುರಿತು ಮಾನಹಾನಿಕರ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಚಾರಿತ್ರ್ಯವಧ ಮಾಡಿದ ಆರೋಪದ ಮೇಲೆ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ನಿವಾಸಿ, ಪ್ರಕಾಶ್ ಶೆಣೈ (44), ಬಂಟ್ವಾಳದ ಸಿದ್ದಕಟ್ಟೆ, ಮೇಗಿನ ಉಳಿರೋಡಿ ನಿವಾಸಿ, ಪ್ರದೀಪ್ ಪೂಜಾರಿ (36), ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಸೀತಾನದಿ ನಡ್ಪಾಲು ನಿವಾಸಿ ತಾರಾನಾಥ ಬಿ ಎಸ್ ಶೆಟ್ಟಿ, (32) ಬಂಧಿತ ಆರೋಪಿಗಳು.

ಇವರು ಬಂಟ್ವಾಳದ ಕಾಲೇಜೊಂದರ ಕಾಲೇಜಿನ ಸಂಚಾಲಕ ಹಾಗೂ ಪ್ರಾಧ್ಯಾಪಕರು ಎಂದು ಹೇಳಲಾಗಿದೆ. ಕಾಲೇಜಿನ ಹಾಗೂ ಶಿಕ್ಷಕರ ನಡುವೆ ಪ್ರಾಧ್ಯಾಪಕರ ನೇಮಕಾತಿ ಹಾಗೂ ಆಡಳಿತ ವಿಚಾರದ ವಿವಾದದ ಕಾಋಣದಿಂದ ಕಾಲೇಜಿನ ಪ್ರಾಧ್ಯಾಪಕಿ ವಿರುದ್ಧ ಮಾನಹಾನಿಕರವಾದ ಪತ್ರ ಹಂಚಲಾಗಿತ್ತು ಎಂದು ಆರೋಪಿಸಲಾಗಿದೆ.

ಮೊದಲಿಗೆ ಪ್ರಾಧ್ಯಾಪಕಿಯ ವಿರುದ್ಧ ಮಾನಹಾನಿಕರವಾದ ಬರಹವನ್ನು ಪೋಸ್ಟ್ ಕಾರ್ಡ್, ಇನ್ ಲ್ಯಾಂಡ್ ಲೆಟರ್ ಮೂಲಕ ಪ್ರಾಧ್ಯಾಪಕಿಯ ಭಾವಚಿತ್ರದೊಂದಿಗೆ ಸಹೋದ್ಯೋಗಿ ಪ್ರಾಧ್ಯಾಪಕರಿಗೆ, ಕಾಲೇಜಿನ ಮುಖ್ಯಸ್ಥರಿಗೆ, ಶಿಕ್ಷಣ ಇಲಾಖೆಯ ಉನ್ನತ ದರ್ಜೆಯ ಅಧಿಕಾರಿಗಳಿಗೆ ಕಳುಹಿಸಿಕೊಟ್ಟಿದ್ದರು. ನಂತರ ಪ್ರಾಧ್ಯಾಪಕಿಯ ಮೊಬೈಲ್ ನಂಬರ್ ಹಾಗೂ ಇ-ಮೇಲ್ ಐಡಿಯನ್ನು ನಮೂದಿಸಿ ಅಶ್ಲೀಲವಾಗಿ ಬರೆದು ಪೋಸ್ಟರ್ ಗಳನ್ನು ಬಹಳ ಕಡೆ ಬಸ್ ನಿಲ್ದಾಣಗಳು ಹಾಗೂ ಸಾರ್ವಜನಿಕ ಶೌಚಾಲಯಗಳಲ್ಲಿ ಅಂಟಿಸಿದ್ದಾರೆ ಎನ್ನಲಾಗಿದೆ. ಇದನ್ನು ನೋಡಿದ ಸಾರ್ವಜನಿಕರು ಪ್ರಾದ್ಯಾಪಕಿಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಪ್ರಾದ್ಯಾಪಕಿ ನೀಡಿದ ದೂರಿನಲ್ಲಿ ತಿಳಿಸಿದ್ದು, ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.

ಇಂದಿನ ಪ್ರಮುಖ ಸುದ್ದಿ :-   ಶಿವಮೊಗ್ಗ ಕಲ್ಲು ತೂರಾಟದ ಘಟನೆ: 24 ಎಫ್‌ಐಆರ್‌ ದಾಖಲು, 60 ಮಂದಿ ಅರೆಸ್ಟ್‌

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement