ಹುಣಸೂರು: ಭೀಕರ ಅಪಘಾತ 6 ಮಂದಿ ಸ್ಥಳದಲ್ಲೇ ಸಾವು

ಮೈಸೂರು: ಮದುವೆ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದ ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಮೈಸೂರು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಲ್‌ ಬೆಟ್ಟ ಬಳಿ ಬುಧವಾರ ಸಂಜೆ ನಡೆದ ಬಗ್ಗೆ ವರದಿಯಾಗಿದೆ.
ಹುಣಸೂರು ಕಡೆಯಿಂದ ಪಾಲಿಬೆಟ್ಟ ಗ್ರಾಮಕ್ಕೆ ತೆರಳುತ್ತಿದ್ದ ಬುಲೆರೋ ವಾಹನ ರಸ್ತೆ ಪಕ್ಕದ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತಪಟ್ಟ 6 ಮಂದಿಯೂ ಪಾಲಿಬೆಟ್ಟ ಗ್ರಾಮದವರಾಗಿದ್ದು, ಬಂಧುಗಳ ಆಕ್ರಂದನ ಮುಗಿಲುಮುಟ್ಟಿತ್ತು.
ದುರ್ಘಟನೆಯಲ್ಲಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರಗಳು ತಿಳಿದುಬರಬೇಕಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಆರ್‌ಎಸ್‌ಎಸ್‌ ನೋಂದಣಿ- ಕಾನೂನುಬದ್ಧ ಸ್ಥಿತಿಗತಿಯ ಬಗ್ಗೆ ಸ್ಪಷ್ಟನೆ ಕೋರಿ ಮುಖ್ಯಸ್ಥ ಮೋಹನ ಭಾಗವತ್‌ಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ನಿಮ್ಮ ಕಾಮೆಂಟ್ ಬರೆಯಿರಿ

advertisement