ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರಿಡಲು ಸಚಿವ ಸಂಪುಟದಿಂದ ಒಪ್ಪಿಗೆ: ಸಿಎಂ ಬೊಮ್ಮಾಯಿ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೆಸರಿಡಲು ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ. ಈ ನಿರ್ಧಾರವನ್ನು ಅನುಮೋದನೆಗಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬುಧವಾರ ಸಂಜೆ ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣದ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬೊಮ್ಮಾಯಿ, ಅನುಮೋದನೆ ದೊರೆತ ನಂತರ ಕಾರ್ಯಾಚರಣೆ ಪ್ರಾರಂಭವಾಗುವ ಮೊದಲು ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರಿಡಲು ಸರ್ಕಾರ ಆದೇಶ ಹೊರಡಿಸುತ್ತದೆ ಎಂದು ಹೇಳಿದರು.

ಶಿವಮೊಗ್ಗ ವಿಮಾನ ನಿಲ್ದಾಣವು ಈಗ ಉಡಾನ್ ಯೋಜನೆಯಡಿಯಲ್ಲಿ ಬರುತ್ತದೆ, ಮುಂದಿನ ಹಂತವು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಿಂದ ಅನುಮತಿ ಪಡೆಯುವುದು ಎಂದು ಬೊಮ್ಮಾಯಿ ಹೇಳಿದರು. ಇದನ್ನು ಪೂರ್ಣಗೊಳಿಸಿದ ನಂತರ ರಾತ್ರಿ ಲ್ಯಾಂಡಿಂಗ್ ಸೌಲಭ್ಯವನ್ನೂ ಒದಗಿಸಲಾಗುವುದು ಎಂದು ಅವರು ಹೇಳಿದರು.
ಡಿಸೆಂಬರ್‌ನಲ್ಲಿ ಉದ್ಘಾಟನೆಗೊಳ್ಳುವ ಮೊದಲು, ಅದರ ಎಲ್ಲ ಕೆಲಸಗಳು ಪೂರ್ಣಗೊಂಡು ಇದು ಅಂತರರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಲಿದೆ ಎಂದು ಅವರು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement