ಶೃಂಗೇರಿ ಶಾರದಾ ಪೀಠಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಶೃಂಗೇರಿ: ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಶ್ರೀ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಜಗದ್ಗುರುಗಳ ಆಶೀರ್ವಾದ ಪಡೆದರು.
ಬೆಂಗಳೂರಿನಿಂದ ಹೆಲಿಕಾಪ್ಟರ್‌ನಲ್ಲಿ ಆಗಮಿಸಿ ಶ್ರೀಮಠಕ್ಕೆ ತೆರಳಿದ ಮುಖ್ಯಮಂತ್ರಿಗಳಿಗೆ ಶೃಂಗೇರಿ ಮಠದ ಆಡಳಿತಾಧಿಕಾರಿ ಡಾ. ವಿ.ಆರ್‌. ಗೌರಿಶಂಕರ್‌ ಪೂರ್ಣಕುಂಭ ಸ್ವಾಗತ ನೀಡಿದರು.

ಶ್ರೀ ಶಾರದಾಂಬಾ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿನಂತರ ಶ್ರೀ ಶಂಕರಾಚಾರ್ಯ ದೇಗುಲಕ್ಕೆ ತೆರಳಿ ತೋರಣ ಗಣಪತಿ ಸನ್ನಿಧಿಗೆ ಪೂಜೆ ಸಲ್ಲಿಸಿದರು. ಬಳಿಕ ನರಸಿಂಹವನಕ್ಕೆ ತೆರಳಿದ ಮುಖ್ಯಮಂತ್ರಿಗಳು ಉಭಯ ಜಗದ್ಗುರುಗಳಾದ ಶ್ರೀ ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಆಶೀರ್ವಾದ ಪಡೆದು ಕೆಲ ಕಾಲ ಮಾತುಕತೆ ನಡೆಸಿದರು.

ಶಂಕರಾಚಾರ್ಯರ ಪರಂಪರೆ, ಶಾರದೆ, ಲಕ್ಷ್ಮಿನರಸಿಂಹರ ಆಶೀರ್ವಾದ ಇರಬೇಕು. ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಮೂಡಿಸಲು ಮಠದ ಪಾತ್ರ ಬಹಳ ಮುಖ್ಯ. ಅವರು ಕರ್ತವ್ಯ ಮಾಡುತ್ತಿರುವುದರಿಂದ ನೈತಿಕತೆ ಉಳಿದಿದೆ. ಮಠದಿಂದ ಸಮಾಜದ ಪರಿವರ್ತನೆ, ಬದಲಾವಣೆ ಕಾರ್ಯ ನಡೆಯಲಿ. ಸ್ವರ್ಗ ಎಲ್ಲೂ ಇಲ್ಲ, ನಮ್ಮೊಳಗೆ ಇದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement