ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ; ಶಾಸಕರ ಗನ್ ಮ್ಯಾನ್ ಸೇರಿ ಇಬ್ಬರ ಬಂಧನ

posted in: ರಾಜ್ಯ | 0

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದ ಜಾಡು ಹಿಡಿದು ಸಿಐಡಿ ತನಿಖೆ ಮುಂದುವರಿದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಗನ್‌ಮ್ಯಾನ್ ಸೇರಿ ಇಬ್ಬರು ಪೊಲೀಸ್ ಕಾನ್​ಸ್ಟೇಬಲ್​ಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ‌. ಕಲಬುರಗಿ ಸಿಟಿ ಆರ್ಮ್ಸ್ ರಿಸರ್ವ್ (ಸಿಎಆರ್) ಪೊಲೀಸ್ ಪೇದೆ ರುದ್ರಗೌಡ ಮತ್ತು ಅಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಗನ್‌ ಮ್ಯಾನ್ ಅಯ್ಯಣ್ಣ ದೇಸಾಯಿ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ ಒಂಬತ್ತಕ್ಕೆ ಏರಿದೆ.

ಈಗಾಗಲೇ ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮೂವರು ಪರೀಕ್ಷಾ ‌ಮೇಲ್ವಿಚಾರಕಿಯರು, ಮೂವರು ಅಭ್ಯರ್ಥಿಗಳು ಹಾಗೂ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಪತಿ ರಾಜೇಶ್ ಹಾಗರಗಿಯನ್ನು ಬಂಧಿಸಲಾಗಿದೆ.
ಶಾಸಕರ ಗನ್‌ಮ್ಯಾನ್ ಅಯ್ಯಣ್ಣ ದೇಸಾಯಿ ಪಿಎಸ್‌ಐ ಪರೀಕ್ಷೆ ಬರೆದಿದ್ದ. ಆದರೆ, ರುದ್ರಗೌಡ ಪರೀಕ್ಷೆ ಬರೆದಿರಲಿಲ್ಲ ಎಂದು ಹೇಳಲಾಗಿದೆ. ಈತನ ಪಾತ್ರ ಏನು ಎಂಬುದರ ಬಗ್ಗೆ ತಿಳಿಯಲು ವಿಚಾರಣೆ ನಡೆಯುತ್ತಿದೆ. ಅಯ್ಯಣ್ಣ ದೇಸಾಯಿ ಆರ್ಥಿಕವಾಗಿ ಸದೃಢನಲ್ಲದಿದ್ದರೂ 30-40 ಲಕ್ಷ ರೂಪಾಯಿ ಹೇಗೆ ಹೊಂದಿಸಿದ್ದ ಎಂಬ ಬಗ್ಗೆಯೂ ಸಿಐಡಿ ವಿಚಾರಣೆ ನಡೆಸುತ್ತಿದೆ.

ಓದಿರಿ :-   ಮುಂದಿನ 15 ದಿನಗಳ ಕಾಲ ಅಧಿಕಾರಿಗಳು ರಜೆ ತೆಗೆದುಕೊಳ್ಳುವಂತಿಲ್ಲ:ಸಿಎಂ ಬೊಮ್ಮಾಯಿ ಸೂಚನೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ