ಸರ್ಕಾರಿ ಹಾಸ್ಟೆಲ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಂದ ಮದ್ಯದ ಪಾರ್ಟಿ: ಫೋಟೋ ವೈರಲ್‌ ಆದ ನಂತ್ರ ತನಿಖೆ ಆರಂಭ

ಹೈದರಾಬಾದ್‌: ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಚಿತ್ರಗಳು ವೈರಲ್ ಆಗಿವೆ. ದಂಡೇಪಲ್ಲಿಯ ಬಾಲಕರ ವಸತಿ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ವಿದಾಯ ಪಾರ್ಟಿ ವೇಳೆ ಬಿಯರ್ ಸೇವಿಸುತ್ತಿರುವ ಘಟನೆ ವರದಿಯಾಗಿದೆ.

10ನೇ ತರಗತಿಯ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಬೀಳ್ಕೊಡುಗೆ ಪಾರ್ಟಿಯನ್ನು ಆಯೋಜಿಸಲು ಬಯಸಿದ್ದರು.
ಅಭಿವೃದ್ಧಿ ಅಧಿಕಾರಿ ಭಗವತಿ ಮಾತನಾಡಿ, ”ಬೇಸಿಗೆ ರಜೆ ಆರಂಭಕ್ಕೂ ಮುನ್ನವೇ ವಿದ್ಯಾರ್ಥಿಗಳು ಹಾಸ್ಟೆಲ್‌ ವಾರ್ಡನ್‌ ಬಳಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಲು ಅನುಮತಿ ಕೋರಿದ್ದರು. ಆದರೆ ಈ ಕಾರ್ಯಕ್ರಮದಲ್ಲಿ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿಗಳು ಮದ್ಯ ಸೇವಿಸಿದ್ದರು.

ಏಪ್ರಿಲ್ 17ರಂದು ಪಾರ್ಟಿ ಆಯೋಜಿಸಲಾಗಿದ್ದು, ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳಿಗೆ ಹಳ್ಳಿಯಲ್ಲಿದ್ದ ಅವರ ಸ್ನೇಹಿತರು ಹೊರಗಿನಿಂದ ಮದ್ಯ ಸರಬರಾಜು ಮಾಡಿದ್ದರು.
ಕೆಲವು ವಿದ್ಯಾರ್ಥಿಗಳು ತಮ್ಮ ಪಾರ್ಟಿಯ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ, ಅದು ಶೀಘ್ರದಲ್ಲೇ ವೈರಲ್ ಆಯಿತು ಮತ್ತು ಅಧಿಕಾರಿಗಳ ಗಮನವನ್ನೂ ಸೆಳೆಯಿತು. ಘಟನೆ ಕುರಿತು ಈಗ ಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ.

advertisement

ನಿಮ್ಮ ಕಾಮೆಂಟ್ ಬರೆಯಿರಿ