ಹಂಪಿಗೆ  ಆರ್‌ಎಸ್‌ಎಸ್ ರಾಷ್ಟ್ರೀಯ ಸಂಪರ್ಕ ಪ್ರಮುಖರ ಭೇಟಿ

posted in: ರಾಜ್ಯ | 0

ಹೊಸಪೇಟೆ: ವಿಶ್ವವಿಖ್ಯಾತ ಹಂಪಿಗೆ ರಾಷ್ಟ್ರೀಯ ಸ್ವಯಂ ಸೇವಕ (ಆರ್‌ಎಸ್‌ಎಸ್) ರಾಷ್ಟ್ರೀಯ ಸಂಪರ್ಕ ಪ್ರಮುಖರಾದ ರಾಮಲಾಲ್ ಜೀ ಗುರುವಾರ ಭೇಟಿ ನೀಡಿದರು.
ಹಂಪಿ ಶ್ರೀವಿರೂಪಾಕ್ಷ ಸ್ವಾಮಿ ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ನಂತರ ಐತಿಹಾಸಿಕ ಪ್ರಸಿದ್ಧಿ ಪಡೆದ ವಿವಿಧ ಸ್ಮಾರಕಗಳನ್ನು ವೀಕ್ಷಿಸಿದರು. ರಾಮ್ ಲಾಲ್ ಜೀ ಅವರು ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿಯಾಗಿ ಪಕ್ಷಕ್ಕೆ ಮಾರ್ಗದರ್ಶನ ನೀಡಿದ್ದರು.

ಸದ್ಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ರಾಷ್ಟ್ರೀಯ ಹಿರಿಯ ಸಂಪರ್ಕ ಪ್ರಮುಖರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅನಿಲ್ ಜೋಶಿ, ಕಟಗಿ ರಾಮಕೃಷ್ಣ, ಸಹಕಾರ ಭಾರತಿ ರವಿ, ರಂಗಸ್ವಾಮಿ ಮೊದಲಾದವರು ಇದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ರಾಜ್ಯದಲ್ಲಿ ಧಾರಾಕಾರ ಮಳೆ: ಕೆಲವೆಡೆ ಶಾಲೆಗಳಿಗೆ ರಜೆ ಘೋಷಣೆ
advertisement

ನಿಮ್ಮ ಕಾಮೆಂಟ್ ಬರೆಯಿರಿ