ಹುಬ್ಬಳ್ಳಿ ಹಿಂಸಾಚಾರದ ಪ್ರಮುಖ ಆರೋಪಿ ಎಐಎಂಐಎಂ ಮುಖಂಡ ಪೊಲೀಸ್‌ ವಶಕ್ಕೆ

ಹುಬ್ಬಳ್ಳಿ:ಕಳೆದ ವಾರ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರದ ಪ್ರಮುಖ ಆರೋಪಿ ಎಂದು ಹೇಳಲಾಗಿರುವ ಎಐಎಂಐಎ ಮುಖಂಡ ಮಹಮ್ಮದ್ ಆರೀಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್ ಹಾಕಿದ ನಂತರ ನಡೆದ ಬೆಳವಣಿಗೆಯಲ್ಲಿ ಪೊಲೀಸ್ ವಾಹನ, ಠಾಣೆ, ದೇವಸ್ಥಾನಗಳ ಮೇಲೆ ಕಲ್ಲು ತೂರಾಟ ನಡೆಸಿ, ಹಿಂಸಾಚಾರ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಈಗಾಗಲೇ 127ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಏಪ್ರಿಲ್ 28ರವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಹುಬ್ಬಳ್ಳಿ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ಎಂದು ಹೇಳಲಾಗಿರುವ ಮಹಮ್ಮದ್ ಆರೀಫ್ ಎಂಬಾತನನ್ನು ಬಂಧಿಸಲಾಗಿದ್ದು, ಇನ್ನೊರ್ವ ಮಾಸ್ಟರ್‌ ಮೈಂಡ್‌ ಆರೋಪಿ ವಾಸೀಂ ಎಂಬಾತ ಇನ್ನೂ ನಾಪತ್ತೆಯಾಗಿದ್ದು, ಈತನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಆತ ಹೈದರಾಬಾದ್‌ ಸುತ್ತಮುತ್ತ ಅಡಗಿಕೊಂಡಿದ್ದಾನೆ ಎಂದು ಹೇಳಲಾಗಿದ್ದು, ಹುಬ್ಬಳ್ಳಿಯಿಂದ ಪೊಲೀಸ್‌ ತಂಡ ಅಲ್ಲಿಗೂ ತೆರಳಿದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement