ಹುಬ್ಬಳ್ಳಿ ಹಿಂಸಾಚಾರ ಘಟನೆ: ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆಗೆ ಹಾಜರಾದ ವಿವಾದಾತ್ಮಕ ಪೋಸ್ಟ್ ಆರೋಪಿ

posted in: ರಾಜ್ಯ | 0

ಹುಬ್ಬಳ್ಳಿ: ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿ ಬಂಧಿತನಾಗಿರುವ ವಿದ್ಯಾರ್ಥಿ ಅಭಿಷೇಕ ನ್ಯಾಯಾಲಯ ನಿರ್ದೇಶನ ಮೇರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದಾನೆ.
ಇಂದಿನಿಂದ (ಶುಕ್ರವಾರ) ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಗೆ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಹಾಜರಾಗಿದ್ದಾನೆ. ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಪ್ರಮುಖ ಆರೋಪಿಯಾಗಿರುವ ಅಭಿಷೇಕ್ ಏಪ್ರಿಲ್‌ 30ರ ವರೆಗೆ ನ್ಯಾಯಾಂಗ ಬಂಧನದಲ್ಲಿದ್ದು, ಪರೀಕ್ಷೆ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆ ಬರೆಯಲಿದ್ದಾನೆ.

ಇಲ್ಲಿನ ಡಾ.ಆರ್.ಬಿ.ಪಾಟೀಲ ಮಹೇಶ ಪಿಯುಸಿ ಕಾಲೇಜಿನಲ್ಲಿ ವಿದ್ಯಾರ್ಥಿಯ ಪರೀಕ್ಷಾ ಕೇಂದ್ರವಿದ್ದು, ಸೂಕ್ತ ಪೊಲೀಸ್ ಭದ್ರತೆಯಲ್ಲಿ ಆಗಮಿಸಿದ ಶುಕ್ರವಾರ ಬಿಜಿನೆಸ್ ಸ್ಟಡಿ ವಿಷಯ ಕುರಿತು ಪರೀಕ್ಷೆ ಬರೆಯಲಿದ್ದಾನೆ. ಅಭಿಷೇಕನಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ...!
advertisement

ನಿಮ್ಮ ಕಾಮೆಂಟ್ ಬರೆಯಿರಿ