ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಸಚಿವ ನವಾಬ್‌ ಮಲಿಕ್‌ ಜಾಮೀನು ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್‌

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ಸಂಪರ್ಕದ ಶಂಕೆಯ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಮಹಾರಾಷ್ಟ್ರ ಸಂಪುಟ ದರ್ಜೆ ಸಚಿವ ನವಾಬ್‌ ಮಲಿಕ್‌ ತಮ್ಮನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಸೂಕ್ತ ನ್ಯಾಯಾಲಯದಲ್ಲಿ ನೀವು ಜಾಮೀನು ಕೋರಬಹುದಾಗಿದ್ದು, ನಾವು ಈ ಹಂತದಲ್ಲಿ ಮಧ್ಯಪ್ರವೇಶಿಸಲಾಗದು. ಇದು ಅತ್ಯಂತ ಆರಂಭಿಕ ಹಂತ” ಎಂದು ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ನೇತೃತ್ವದ ವಿಭಾಗೀಯ ಪೀಠವು ಹೇಳಿತು.

ಮಲಿಕ್‌ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕಪಿಲ್‌ ಸಿಬಲ್‌ ಅವರು “ದೃಢೀಕೃತವಾದ ಯಾವುದೇ ಅಪರಾಧ ಇಲ್ಲದಿರುವಾಗ ಅಕ್ರಮ ಹಣ ವರ್ಗಾವಣೆ ಪ್ರಕರಣ ಹೇಗೆ ಅನ್ವಯಿಸುತ್ತದೆ” ಎಂದು ವಾದಿಸಿದರು.
ಅರ್ನಬ್‌ ಗೋಸ್ವಾಮಿ ಪ್ರಕರಣದಲ್ಲಿ ನ್ಯಾ. ಚಂದ್ರಚೂಡ್‌ ಅವರ ತೀರ್ಪನ್ನು ಉಲ್ಲೇಖಿಸಿದ ಸಿಬಲ್‌ ಅವರು “ಯಾವುದೇ ದೃಢೀಕೃತ ಅಪರಾಧವಿಲ್ಲ. ಹೀಗಿರುವಾಗ ಅಕ್ರಮ ಹಣ ವರ್ಗಾವಣೆ ಕಾಯಿದೆ ಹೇಗೆ ಅನ್ವಯಿಸುತ್ತದೆ? ನಾವು ಹೈಕೋರ್ಟ್‌ ಆದೇಶವನ್ನು ವಿರೋಧಿಸುತ್ತೇವೆ. ಅರ್ನಬ್‌ ಗೋಸ್ವಾಮಿ ಪ್ರಕರಣವು ನಮ್ಮ ಪರವಾಗಿದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಆಗ ಪೀಠವು “ಇದಕ್ಕೆ ಅನುಮತಿಸಲಾಗದು. ಮನವಿ ವಜಾ ಮಾಡಲಾಗಿದೆ” ಎಂದಿತು. ಮಾರ್ಚ್‌ 15ರಂದು ಜಾಮೀನು ಮನವಿ ವಜಾ ಮಾಡಿದ ಬಾಂಬೆ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಮಲಿಕ್‌ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಜಾರಿ ನಿರ್ದೇಶನಾಲಯ ಎನ್ ಸಿಪಿ ನಾಯಕನನ್ನು ಫೆ.23 ರಂದು ಬಂಧಿಸಿತ್ತು. ಭೂಗತ ಜಗತ್ತು ಹಾಗೂ ದಾವೂದ್ ಇಬ್ರಾಹಿಮ್’ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಇದಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement