ನಾಳೆಯೂ ಹಿಜಾಬ್‌ಗಾಗಿ ಹೈಡ್ರಾಮಾ ಮಾಡಿದರೆ ಕ್ರಿಮಿನಲ್ ಪ್ರಕರಣ ದಾಖಲು ಮಾಡ್ತೇವೆ: ಶಾಸಕ ರಘುಪತಿ ಭಟ್ ಎಚ್ಚರಿಕೆ

ಉಡುಪಿ: ಹೈಕೋರ್ಟ್‌ ಆದೇಶ ಮೀರಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ನಾಳೆಯೂ ಪಟ್ಟು ಹಿಡಿದರೆ ಅಂತಹ ವಿದ್ಯಾರ್ಥಿನಿಯರ ಮೇಲೆ ಕ್ರಿಮಿನಲ್ ಕೇಸ್ ಜೊತೆಗೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಶಾಸಕ ರಘುಪತಿ ಭಟ್ ಎಚ್ಚರಿಕೆ ನೀಡಿದ್ದಾರೆ.
ಉಡುಪಿ ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್ ಹೋರಾಟಗಾರ್ತಿಯರಿಬ್ಬರು ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್‌ ಕುರಿತು ಹೈಡ್ರಾಮಾ ಸೃಷ್ಟಿಸಿರುವುದದರ ಕುರಿತು ಮಾಧ್ಯದವರೊಂದಿಗೆ ಮಾತನಾಡಿದ ಅವರು, ಇದೊಂದು ಷಡ್ಯಂತ್ರ ಎಂದು ಮತ್ತೊಮ್ಮೆ ಸಾಬೀತಾಗಿದೆ. ನಿನ್ನೆ ಸಂಜೆ ವರೆಗೆ ಫೋನ್ ಮಾಡಿ ಹಾಲ್ ಟಿಕೆಟ್ ಪಡೆಯಲು ಹೇಳಲಾಗಿತ್ತು. ಬೆಳಗ್ಗಿನ ವರೆಗೂ ಹಾಲ್ ಟಿಕೆಟ್ ಪಡೆಯಲು ಬರಲಿಲ್ಲ. ಇಂದು ಬೆಳಗ್ಗೆ 9:30ಕ್ಕೆ ಕಾಲೇಜಿಗೆ ಬಂದವರಿಗೆ ಹಿಜಾಬ್ ತೆಗೆದಿಟ್ಟು ಹೋದರೆ ಮಾತ್ರ ಹಾಲ್ ಟಿಕೆಟ್ ಕೊಡುವುದಾಗಿ ಪ್ರಾಂಶುಪಾಲರು ಹೇಳಿದ್ದರಿಂದ ಹಿಜಾಬ್ ತೆಗೆದು ಹಾಲ್ ಟಿಕೆಟ್ ಪಡದುಕೊಂಡು ಹೋಗಿದ್ದಾರೆ. ಆದರೆ ಬಳಿಕ ಪರೀಕ್ಷಾ ಕೇಂದ್ರಕ್ಕೆ ಹೋಗಿ ಹಿಜಾಬ್‌ ಧರಿಸಿ ತಮಗೆ ಒಳಗೆ ಬಿಡಬೇಕು ಎಂದು ಹೈಡ್ರಾಮಾ ಮಾಡಿದ್ದಾರೆ ಎಂದು ಶಾಸಕರು ಕಿಡಿಕಾರಿದ್ದಾರೆ.

ಈ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜೊತೆ ಮಾತನಾಡಿದ್ದೇನೆ. ನಾಳೆಯೂ ಮತ್ತೆ ಹೈಡ್ರಾಮಾ ಮಾಡಿದರೆ ಕ್ರಿಮಿನಲ್‌ ಕೇಸ್‌ ಹಾಗೂ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಹೇಳಿದ್ದೇನೆ ಎಂದು ಎಚ್ಚರಿಸಿದರು.
ಇವರೇನು ಹುಡುಗಾಟಿಕೆ ಮಾಡುತ್ತಿದ್ದಾರಾ?ಹಿಜಾಬ್ ಮತ್ತು ಪರೀಕ್ಷೆಗೆ ಸಂಬಂಧ ಇಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಸಹ ಹೇಳಿದ್ದಾರೆ. ಈ ಮಕ್ಕಳ ಮೇಲೆ ಶಿಸ್ತುಕ್ರಮ ಕೈಗೊಂಡು ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಹಿಜಾಬ್ ಧರಿಸಲು ಬಿಟ್ಟರೂ ಅವರು ಪರೀಕ್ಷೆ ಬರೆಯುವುದಿಲ್ಲ. ನಮ್ಮ ಕಾಲೇಜಿನ ವಾತಾವರಣ ಕೆಡಿಸುವುದು ಮತ್ತು ಸಮಾಜದಲ್ಲಿ ಅಶಾಂತಿ ಸೃಷ್ಟಿ ಮಾಡುವುದೇ ಇವರ ಉದ್ದೇಶ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ಇವರಿಂದ ಬೇರೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಈ ವಿದ್ಯಾರ್ಥಿನಿಯರಿಗೆ ಯಾಕೆ ಕಡಿವಾಣ ಹಾಕುವುದಿಲ್ಲ ಎಂಬುದಾಗಿ ನನಗೆ ಅನೇಕ ಪೋಷಕರು ಕರೆ ಮಾಡಿದ್ದಾರೆ. ನಮ್ಮ ಮಕ್ಕಳಿಗೆ ಪರೀಕ್ಷೆ ಬರೆಯಲು ಅಡ್ಡಿಯಾಗುತ್ತದೆ ಎಂದು ಹೇಳಿದ್ದಾರೆ. ಹಾಲ್‍ ಟಿಕೆಟ್‌ ಪಡೆಯುವಾಗ ಹಿಜಾಬ್ ತೆಗೆದವರಿಗೆ ಹಿಜಾಬ್‌ ತೆಗೆದು ಪರೀಕ್ಷೆ ಬರೆಯಲು ಬರುವುದಿಲ್ಲವಾ..? ಸಮಾಜದಲ್ಲಿ ಶಾಂತಿ ಕದಡುವುದು ಇವರ ಉದ್ದೇಶ.
ಹೀಗಾಗಿ ಇವರ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲ. ಇನ್ನು ಹೀಗೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲು‌ ಮುಂದಾಗುತ್ತೇವೆ. ನ್ಯಾಯಾಂಗ ನಿಂದನೆಯ ಪ್ರಕರಣ ದಾಖಲಿಸುತ್ತೇವೆ ಎಂದು ಹೇಳಿದರು.

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement