ಮಗುವಿಗೆ ಜನ್ಮ ನೀಡಿದ 17 ವರ್ಷದ ಬಾಲಕಿ: ಅತ್ಯಾಚಾರ ಆರೋಪದ ಮೇಲೆ 12 ವರ್ಷದ ಬಾಲಕನ ಬಂಧನ…!

ಚೆನ್ನೈ: 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭ ಧರಿಸುವಂತೆ ಮಾಡಿದ ಆರೋಪದ ಮೇಲೆ 12 ವರ್ಷದ ಬಾಲಕನನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ತಂಜಾವೂರು ಅಖಿಲ ಮಹಿಳಾ ಪೊಲೀಸ್ ಪಡೆ ಬಂಧಿಸಿದೆ.
ಹುಡುಗಿ ಏಪ್ರಿಲ್ 16 ರಂದು ಹೊಟ್ಟೆ ನೋವೆಂದು ಹೇಳಿದಾಗ ಆಕೆಯ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ತಪಾಸಣೆ ನಡೆಸಿದಾಗ ಆಕೆ ಒಂಬತ್ತು ತಿಂಗಳ ಗರ್ಭಿಣಿ ಎಂದು ವೈದ್ಯರು ಕಂಡುಕೊಂಡಿದ್ದಾರೆ. ನಂತರ ಅವಳು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ವರದಿಯಾಗಿದೆ. ನಂತರ ಆಸ್ಪತ್ರೆಯು ಮಹಿಳಾ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದೆ. 17 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಏಪ್ರಿಲ್ 18 ರಂದು ಆಸ್ಪತ್ರೆಯಿಂದ ನಮಗೆ ಕರೆ ಬಂದಿತ್ತು ಎಂದು ಪೊಲೀಸ್‌ ಕಚೇರಿ ತಿಳಿಸಿದೆ.

ಸಂತ್ರಸ್ತೆ ಮತ್ತು ಆರೋಪಿ ಇಬ್ಬರೂ ಅಕ್ಕಪಕ್ಕದಲ್ಲೇ ವಾಸಿಸುತ್ತಿದ್ದು, ಇಬ್ಬರೂ ಶಾಲೆ ಬಿಟ್ಟವರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಬಾಲಕನ ವೈದ್ಯಕೀಯ ಪರೀಕ್ಷೆಗೆ ಆದೇಶಿಸಿದರು ಮತ್ತು ಬೇರೆ ಯಾರಾದರೂ ಇದರಲ್ಲಿ ಭಾಗಿಯಾಗಿದ್ದಾರೆಯೇ ಎಂದು ಪೊಲೀಸರನ್ನು ಕೇಳಿದ್ದಾರೆ.
ಡಿಎನ್‌ಎ ಪರೀಕ್ಷೆ ಸೇರಿದಂತೆ ವೈಜ್ಞಾನಿಕ ವಿಧಾನಗಳನ್ನು ಬಳಸಿಕೊಂಡು ಹುಡುಗನ ವಯಸ್ಸನ್ನು ಖಚಿತಪಡಿಸಿಕೊಳ್ಳಲು ಮತ್ತು ಅವನು ಮಗುವಿನ ತಂದೆಯೇ ಅಥವಾ ಬೇರೆ ಯಾರಾದರೂ ಭಾಗಿಯಾಗಿದ್ದರೆ ಎಂದು ಖಚಿತಪಡಿಸಿಕೊಳ್ಳಲು ನಾವು ನಿರ್ಧರಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ. ಬಾಲಕನನ್ನು ತಂಜಾವೂರಿನ ಬಾಲಾಪರಾಧ ಗೃಹಕ್ಕೆ ಕಳುಹಿಸಲಾಗಿದೆ.

ಪ್ರಮುಖ ಸುದ್ದಿ :-   ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement