ಮತ್ತೆ ಏರುತ್ತಿರುವ ಕೊರೊನಾ ಸೋಂಕು. ಭಾರತದಲ್ಲಿ 2,451 ಹೊಸದಾಗಿ ಕೋವಿಡ್‌-19 ಪ್ರಕರಣಗಳು ದಾಖಲು

ನವದೆಹಲಿ: ಭಾರತದಲ್ಲಿ ಕೊರೋನಾ ಸೋಂಕು ಮತ್ತೆ ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,451 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ ಹಾಗೂ 54 ಮಂದಿ ಸಾವಿಗೀಡಾಗಿದ್ದಾರೆ.
ಭಾರತದಲ್ಲಿ ಕೋವಿಡ್‌ಡ್‌-19 ಪ್ರಕರಣಗಳು ಮೇಲ್ಮುಖವಾದ ಪ್ರವೃತ್ತಿಯನ್ನು ತೋರಿಸುತ್ತಿದ್ದು, ಏಪ್ರಿಲ್ 22 ರಂದು ಶುಕ್ರವಾರ ವರದಿಯಾದ 2,451 ಹೊಸ ಕೊರೊನಾ ವೈರಸ್ ಪ್ರಕರಣಗಳು ನಿನ್ನೆ ಗುರುವಾರ ದಾಖಲಾದ 2,380 ಪ್ರಕರಣಗಳಿಗಿಂತ ಸ್ವಲ್ಪ ಹೆಚ್ಚಾಗಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,52,425ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,589ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,16,068ಕ್ಕೆ ತಲುಪಿದೆ. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,22,116ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 14,241 ಇದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,87,26,26,515 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಪ್ರಮುಖ ಸುದ್ದಿ :-   ಕಾರು ಅಡ್ಡ ಹಾಕಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗೆ ಕಿರುಕುಳ : "ನಾವು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದಲ್ಲಿದ್ದೇವೆಯೇ ಎಂದು ನಟಿ ಪ್ರಶ್ನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement