ಹುಬ್ಬಳ್ಳಿ ಹಿಂಸಾಚಾರದಲ್ಲಿ ಹಲವರ ಕೈವಾಡವಿದೆ, ಶೀಘ್ರವೇ ಎಲ್ಲರ ಬಂಧನ: ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಹುಬ್ಬಳ್ಳಿ ಹಿಂಸಾಚಾರ ಪ್ರಕರಣದ ಹಿಂದೆ ಹಲವು ಕಾಣದ ಕೈಗಳು ಕೆಲಸ ಮಾಡಿವೆ. ಪ್ರಕರಣದಲ್ಲಿ ಭಾಗಿಯಾದವರನ್ನು ಎಲ್ಲರನ್ನೂ ಬಂಧಿಸಿವ ಜಾವಾಬ್ದಾರಿ ನಿಭಾಯಿಸುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಸಾಮಾಜಿಕ ಸೌಹಾರ್ದತೆ ಕದಡುವ ಸಂಘಟನೆಗಳ ಚಟುವಟಿಕೆಗಳನ್ನು ನಿಯಂತ್ರಿಸುವುದು ಹಾಗೂ ಅಂತಹ ಸಂಘಟನೆಗಳನ್ನು ನಿಷೇಧಿಸುವುದಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿಯ ಘಟನೆಯಲ್ಲಿ ಭಾರಿ ಪ್ರಮಾಣದಲ್ಲಿ ಹಿಂಸಾಚಾರ ನಡೆಸಲು ಕೆಲವರು ಸಿದ್ಧತೆ ನಡೆಸಿದ್ದರು. ಆದರೆ, ಅದನ್ನು ಮಟ್ಟ ಹಾಕಲು ಪೊಲೀಸರು ಶಕ್ತವಾಗಿದೆ. ಹಾಗೂ ನಮ್ಮ ಪೊಲೀಸ್ ಇಲಾಖೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಿದೆ. ಆದರೆ, ಸ್ಪಷ್ಟವಾಗಿ ಯಾವ ಸಂಘಟನೆಯ ಕೈವಾಡ ಇದರ ಹಿಂದೆ ಇದೆ ಎನ್ನುವುದನ್ನು ಶೀಘ್ರವೇ ಬಹಿರಂಗಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ. ಅ

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement