ಉಡುಪಿ: ನಮ್ಮ ದೇಶ ಎತ್ತ ಸಾಗುತ್ತಿದೆ -ಪರೀಕ್ಷೆಗೆ ಗೈರಾದ ಹಿಜಾಬ್ ಹೋರಾಟಗಾರ್ತಿ ಅಲಿಯಾ ಅಸ್ಸಾದಿ ಟ್ವೀಟ್

ಉಡುಪಿ: ನಮ್ಮ ದೇಶ ಎಲ್ಲಿಗೆ ಸಾಗುತ್ತಿದೆ? ಎಂದು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ನಿರಾಕರಿಸಿದ ನಂತರ ಹಿಜಾಬ್ ಗಾಗಿ ಕೋರ್ಟ್ ಮೆಟ್ಟಿಲೇರಿದ್ದ ಅರ್ಜಿದಾರರಾದ ಪೈಕಿ ಒಬ್ಬರಾದ ಅಲಿಯಾ ಅಸ್ಸಾದಿ ಅವರು ಟ್ವೀಟಿನಲ್ಲಿ ಪ್ರಶ್ನಿಸಿದ್ದಾರೆ.

ಉಡುಪಿ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಆಲಿಯಾ ಅಸಾದಿ ಮತ್ತು ರೇಷಮ್ ಪ್ರವೇಶ ಪತ್ರ ಪಡೆದು ಬಳಿಕ ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯಬೇಕೆಂಬ ಹಠ ಹಿಡಿದಿದ್ದರು. ಆದರೆ ಅವರಿಗೆ ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲು ಪ್ರವೇಶ ನಿರಾಕರಿಸಲಾಗಿತ್ತು. ಹೀಗಾಗಿ ಅವರು ಪರೀಕ್ಷೆ ಬರೆಯದೆ ಮನೆಗಳಿಗೆ ಹಿಂದಿರುಗಿದ್ದರು.

ಪರೀಕ್ಷೆಗೆ ಗೈರಾಗಿದ್ದ ಆಲಿಯಾ ಅಸಾದಿ ಈ ಕುರಿತು ಟ್ವೀಟ್‌ ಮಾಡಿದ್ದು ತಮ್ಮ ಆಡಳಿತದ ವೈಖರಿ ಬಗ್ಗೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಶುಕ್ರವಾರ ಏಪ್ರಿಲ್ 22 ರಂದು ತಡರಾತ್ರಿ ಅಲಿಯಾ ಅಸ್ಸಾದಿ ಮಾಡಿದ ಟ್ವೀಟ್‌ನಲ್ಲಿ,’ನನಗೆ ಮತ್ತು ರೇಷಮ್ ಗೆ ಪರೀಕ್ಷೆ ಬರೆಯಲು ಪರೀಕ್ಷಾ ಸಿಬ್ಬಂದಿ ಅವಕಾಶ ನಿರಾಕರಿಸಿದ್ದಾರೆ. ಇದರಿಂದ ನಾವು ಮತ್ತೆ ಮತ್ತೆ ನಿರಾಸೆಗೆ ಒಳಗಾಗುತ್ತಿದ್ದೇವೆ. ಬಿಜೆಪಿ ಶಾಸಕ ರಘುಪತಿ ಭಟ್‌ ಅವರು ನಮಗೆ ಬೆದರಿಕೆ ಹಾಕಿದ್ದಾರೆ. ಕ್ರಿಮಿನಲ್‌, ನ್ಯಾಯಾಂಗ ನಿಂದನೆ ಕೇಸ್‌ ದಾಖಲಿಸುವುದಾಗಿ ಹೆದರಿಸುತ್ತಿದ್ದಾರೆ. ನಮ್ಮ ವಿರುದ್ಧ ಕ್ರಿಮಿನಲ್‌ ಕೇಸ್‌ ಹಾಕಲು ಇಲ್ಲಿ ಯಾವ ಅಪರಾಧ ನಡೆದಿದೆ. ನಮ್ಮ ದೇಶ ಎತ್ತ ಸಾಗುತ್ತಿದೆ’ ಎಂದು ಆಲಿಯಾ ಅಸಾದಿ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement