ಉಡುಪಿ: ಶನಿವಾರವೂ ಮೂವರು ಹಿಜಾಬ್ ಹೋರಾಟಗಾರ್ತಿಯರು ಗೈರು

posted in: ರಾಜ್ಯ | 0

ಉಡುಪಿ: ಹಿಜಾಬ್‌ಗಾಗಿ ಹೋರಾಟ ನಡೆಸುತ್ತಿರುವ ಇಲ್ಲಿನ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಮೂವರು ಹಿಜಾಬ್‌ ಹೋರಾಟಗಾರ್ತಿಯರು ಶನಿವಾರ ದ್ವಿತೀಯ ಪಿಯುಸಿ ಪರೀಕ್ಷೆಗೆ ಗೈರಾಗಿದ್ದಾರೆ.
ಇಂದು ವಿಜ್ಞಾನ ವಿಭಾಗದ ಪರೀಕ್ಷೆ ಆರಂಭವಾಗಿದ್ದು, ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಶನಿವಾರ ವಿದ್ಯೋದಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಗಣಿತ ವಿಷಯದಲ್ಲಿ ಪರೀಕ್ಷೆ ಬರೆಯಬೇಕಿತ್ತು. ಆದರೆ ಅಲ್ಮಾಸ್, ಹಜ್ರಾ, ಆಯೇಷಾ ಎಂಬ ಮೂವರು ಗೈರಾಗಿದ್ದಾರೆ.

ಇವರು ಹಿಜಾಬ್ ಹಕ್ಕಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಮೂವರ ಪೈಕಿ ಹಜ್ರಾ ಹಾಗೂ ಆಯೆಷಾ ಹಾಲ್ ಟಿಕೆಟ್‌ ಪಡೆದುಕೊಂಡಿರಲ್ಲ. ಆದರೆ ಅಲ್ಮಾಸ್ ಹಾಲ್ ಟಿಕೆಟ್ ಪಡೆದುಕೊಂಡಿದ್ದರೂ ಪರೀಕ್ಷೆಗೆ ಗೈರಾಗಿದ್ದಾರೆ.
ಆಲ್ಮಾಸ್ ಶುಕ್ರವಾರ ಕಾಲೇಜಿಗೆ ಬಂದು ಪ್ರವೇಶ ಪತ್ರ ಪಡೆದುಕೊಂಡಿದ್ದರು. ಉಳಿದ ಇಬ್ಬರು ಪಡೆದುಕೊಂಡಿರಲಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲ ರುದ್ರೇಗೌಡ ತಿಳಿಸಿದರು.
ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡದ ಕಾರಣಕ್ಕೆ ಶುಕ್ರವಾರ ಆಲಿಯಾ ಅಸಾದಿ ಹಾಗೂ ರೇಶಮ್ ಪರೀಕ್ಷೆ ಬಹಿಷ್ಕರಿಸಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಸಾಹಿತಿ ಡಿ.ಎಸ್. ನಾಗಭೂಷಣ ನಿಧನ
advertisement

ನಿಮ್ಮ ಕಾಮೆಂಟ್ ಬರೆಯಿರಿ