ಒಂದೇ ಕುಟುಂಬದ ಐವರ ಹತ್ಯೆ ಮಾಡಿ ಮನೆಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು

ನವದೆಹಲಿ: ಉತ್ತರಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಒಂದೇ ಕುಟುಂಬದ ಐವರನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಮನೆಗೆ ಬೆಂಚಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾದ ಘಟನೆ ಆಘಾತಕಾರಿ ಘಟನೆ ನಡೆದಿದೆ.
ಮನೆಗೆ ಏಕಾಏಕಿ ದುಷ್ಕರ್ಮಿಗಳು ದಾಳಿ ನಡೆಸಿ ಹರಿತವಾದ ಆಯುಧ ಬಳಸಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ್ದಾರೆ. ನಂತರ ಬಳಿಕ ಇಡೀ ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಬೆಂಕಿಯಿಂದ ಹೊಗೆ ಬರಲಾರಂಭಿಸಿದಾಗ ಅಕ್ಕಪಕ್ಕದ ಮನೆಯವರು ಹೊರಗೆ ಬಂದು ನೋಡಿ ಘಟನಾ ಸ್ಥಳಕ್ಕೆ ತೆರಳಿದಾಗ ಐವರನ್ನು ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ವಿಧಿವಿಜ್ಞಾನ ತಜ್ಞರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಕಾರಣ ಏನೆಂಬುದು ಸ್ಪಷ್ಟವಾಗಿಲ್ಲ. ಪ್ರಾಥಮಿಕ ತನಿಖೆಯ ಬಳಿಕ ಕೊಲೆ ಹಿಂದಿನ ಉದ್ದೇಶ ಗೊತ್ತಾಗಲಿದೆ. ಮೃತರೆಲ್ಲರೂ ಮನೆಯ ಅಂಗಳದಲ್ಲಿ ಮಲಗಿದ್ದಾಗ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 

advertisement

ನಿಮ್ಮ ಕಾಮೆಂಟ್ ಬರೆಯಿರಿ