ಚಿಕ್ಕಮಗಳೂರು: ಹೆಜ್ಜೇನು ದಾಳಿಯಿಂದ ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಭೋಜೇಗೌಡ ಸಾವು

posted in: ರಾಜ್ಯ | 0

ಚಿಕ್ಕಮಗಳೂರು: ತಾಲೂಕಿನ ಕೃಷ್ಣಗಿರಿ ಕಾಫಿ ತೋಟದಲ್ಲಿ ಜೇನುನೊಣಗಳು ದಾಳಿ ನಡೆಸಿದ ಪರಿಣಾಮ ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಎಂ.ಎಸ್.ಭೋಜೇಗೌಡ ಅವರು ಅಸುನೀಗಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಕೃಷ್ಣಗಿರಿ ಎಸ್ಟೇಟ್​ ನಲ್ಲಿ ಈ ದುರ್ಘಟನೆ ನಡೆದಿದೆ. ಕಾಫಿ ತೋಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಆಕಸ್ಮಿಕ ನಡೆದಿದೆ. ಒಮ್ಮೆಲ್ಲೇ ಸಾವಿರಾರು ಹೆಜ್ಜೇನುಗಳು (Honey bee attack) ಭೋಜೇಗೌಡರ ಮೇಲೆ ಹಿಂಡು ಹಿಂಡಾಗಿ ದಾಳಿ ನಡೆಸಿದ್ದು, ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆಯೇ ಭೋಜೇಗೌಡ ಮೃತಪಟ್ಟಿದ್ದಾರೆ (Chikamagalur).

ಕಳೆದ ತಿಂಗಳು ಮಾರ್ಚ್ ನಲ್ಲಿ ಬೋಜೇಗೌಡರ ಕಾಫಿ ಮಂಡಳಿ ಅಧ್ಯಕ್ಷಗಿರಿ ಅವಧಿ ಕೊನೆಗೊಂಡಿತ್ತು. ಎರಡು ಬಾರಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿದ್ದ ಎಂ.ಎಸ್. ಭೋಜೇಗೌಡ ಒಂದು ಬಾರಿ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದರು. ಒಮ್ಮೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ಓದಿರಿ :-   ಮಳೆ ಅನಾಹುತ: ಸಚಿವರ ನೇತೃತ್ವದಲ್ಲಿ 8 ಕಾರ್ಯಪಡೆ ರಚನೆ
advertisement

ನಿಮ್ಮ ಕಾಮೆಂಟ್ ಬರೆಯಿರಿ