ಹಾವೇರಿಯಲ್ಲಿ ಸೆಪ್ಟೆಂಬರ್ 23ರಿಂದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

posted in: ರಾಜ್ಯ | 0

ಬೆಂಗಳೂರು: ಹಾವೇರಿಯಲ್ಲಿ ಸೆಪ್ಟೆಂಬರ್ 23, 24 ಹಾಗೂ 25 ರಂದು ಮೂರು ದಿನಗಳ ಕಾಲ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ಶನಿವಾರ ತೀರ್ಮಾನಿಸಲಾಯಿತು.
ಇಂದು, ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ಗೋಷ್ಠಿಗಳಲ್ಲಿ ಹೆಚ್ಚಿನ ಜನ ಭಾಗವಹಿಸುವಂತಾಗಬೇಕು ಹಾಗೂ ಅವು ಅರ್ಥಪೂರ್ಣವಾಗಿರಬೇಕು. ಸಮಿತಿಗಳಲ್ಲಿ ಸಕ್ರಿಯವಾಗಿರುವ ಸ್ಥಳೀಯ ಜನರನ್ನು ತೊಡಗಿಸಿಕೊಳ್ಳಬೇಕು. ಗೋಷ್ಠಿಗಳಲ್ಲಿಯೂ ಸ್ಥಳೀಯರಿಗೆ ಅವಕಾಶ ನೀಡಬೇಕು. ಎಲ್ಲಾ ತಾಲ್ಲೂಕುಗಳ ಸ್ವಯಂಸೇವಕರು ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಸೂಕ್ತ ವಸತಿ ವ್ಯವಸ್ಥೆ
ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ವಸತಿ ವ್ಯವಸ್ಥೆಯಾಗಬೇಕು. ಎಷ್ಟು ಜನರಿಗೆ ವಸತಿ ವ್ಯವಸ್ಥೆಯಾಗಿದೆ ಎಂಬ ಬಗ್ಗೆ ನಿಖರವಾಗಿ ಯೋಚಿಸಿ. ಹಾಸ್ಟೆಲ್ ಗಳು ಮತ್ತು ವಸತಿ ಶಾಲೆಗಳನ್ನು ಸದುಪಯೋಗಿಸಿಕೊಳ್ಳಬೇಕು. ಪ್ರಮುಖ ಕಲ್ಯಾಣ ಮಂಟಪಗಳನ್ನು ಗುರುತಿಸಿ ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಹುಬ್ಬಳ್ಳಿ ಮತ್ತು ದಾವಣಗೆರೆಯಲ್ಲಿಯೂ ವಸತಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.
ತುರ್ತು ಅಗತ್ಯದ ಸಂದರ್ಭದಲ್ಲಿ ಬಳಕೆ ಮಾಡಲು ಕುಂಭಮೇಳದಲ್ಲಿ ಆಯೋಜಿಸಿದಂತೆ ಟೆಂಟ್ ಉಪಯೋಗಿಸಬಹುದು. ಇವುಗಳ ಬಗ್ಗೆ ಸೂಕ್ತ ನೀಲನಕ್ಷೆ ಸಿದ್ಧಪಡಿಸಲು ತಿಳಿಸಿದರು.

ಇಂದಿನ ಪ್ರಮುಖ ಸುದ್ದಿ :-   ರಾಜ್ಯದ ಜನತೆಗೆ ರಾಜ್ಯ ಸರ್ಕಾರದಿಂದ ಶಾಕ್ : ಜೂನ್‌1 ರಿಂದಲೇ ವಿದ್ಯುತ್ ದರ ಹೆಚ್ಚಳ...!

ಊಟ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಯ ಬಗ್ಗೆಯೂ ಸೂಕ್ತ ಯೋಜನೆಗಳನ್ನು ರೂಪಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಸಿದ್ಧತೆಗಳ ಬಗ್ಗೆ ಜಿಲ್ಲಾಮಟ್ಟದಲ್ಲಿ ಮತ್ತೊಂದು ಸಭೆ ಕರೆದು ಅಂತಿಮಗೊಳಿಸಬೇಕು.. ಬಜೆಟ್ ನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ರೂ. ಒದಗಿಸಲಾಗಿದೆ ಎಂದರು.

ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಚಂದ್ರಶೇಖರ್ ಕಂಬಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಶಿವರಾಂ ಹೆಬ್ಬಾರ, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ಅರುಣಕುಮಾರ್ ಪೂಜಾರ್, ನೆಹರು ಓಲೇಕಾರ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹಮದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ಹಾವೇರಿ ಜಿಲ್ಲಾಧಿಕಾರಿ ಡಾ. ಸಂಜಯ ಶೆಟ್ಟೆಣ್ಣವರ್ ಮೊದಲಾದವರಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಶೀಘ್ರವೇ 15000 ಪೊಲೀಸ್ ಪೇದೆಗಳ ಹುದ್ದೆ ಭರ್ತಿ: ಗೃಹ ಸಚಿವ ಡಾ. ಜಿ.ಪರಮೇಶ್ವರ

5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement