ಜಮ್ಮುವಿನ ಸುಂಜ್ವಾನ್‌ನಲ್ಲಿ ಭದ್ರತಾ ಸಿಬ್ಬಂದಿ ಬಸ್ ಮೇಲೆ ಭಯೋತ್ಪಾದಕರಿಂದ ನಡೆದ ಗ್ರೆನೇಡ್‌-ಗುಂಡಿನ ದಾಳಿ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ಆತ್ಮಾಹುತಿ ದಾಳಿಯ ಹೊಣೆ ಹೊತ್ತಿದ್ದ ಜೈಶ್-ಎ-ಮೊಹಮ್ಮದ್ ಉಗ್ರರನ್ನು ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ ಒಂದು ದಿನದ ನಂತರ.ಜಮ್ಮು ಮತ್ತು ಕಾಶ್ಮೀರದ ಸುಂಜ್ವಾನ್ ಪ್ರದೇಶದಲ್ಲಿ ನಡೆದ ಭಯೋತ್ಪಾದಕ ದಾಳಿಯ ಸಿಸಿಟಿವಿ ದೃಶ್ಯಾವಳಿಗಳು ಶನಿವಾರ ಹೊರಬಿದ್ದಿದೆ.
ಶುಕ್ರವಾರ ಬೆಳಗಿನ ಜಾವ ಬಸ್‌ನಲ್ಲಿದ್ದ ಭದ್ರತಾ ಸಿಬ್ಬಂದಿ ವಾಹನದ ಮೇಲೆ ಭಯೋತ್ಪಾದಕರು ಗುಂಡುಗಳನ್ನು ಹಾರಿಸಿದರು ಮತ್ತು ಗ್ರೆನೇಡ್‌ಗಳನ್ನು ಎಸೆದರು. ಈ ಘಟನೆಯಲ್ಲಿ ಒಬ್ಬ ಅರೆಸೈನಿಕ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡರು.

ಶೋಧ ಹಾಗೂ ಕಾರ್ಡನ್ ಕಾರ್ಯಾಚರಣೆಗೆ ತೆರಳುತ್ತಿರುವಾಗ ಚಡ್ಡಾ ಸೇನಾ ಶಿಬಿರದ ಬಳಿ ಸಿಐಎಸ್ಎಫ್ ವಾಹನವು ಬಸ್ ನಿಲ್ದಾಣದ ಬಳಿ ರಸ್ತೆಯ ಮಧ್ಯದಲ್ಲಿ ನಿಂತಿರುವುದನ್ನು ವೀಡಿಯೊ ತೋರಿಸುತ್ತದೆ. ಕೆಲವೇ ಕ್ಷಣಗಳಲ್ಲಿ ವಾಹನದ ಮೇಲೆ ಏಕಾಏಕಿ ಮಾರಕಾಸ್ತ್ರ ಹಾಗೂ ಗುಂಡುಗಳ ಸುರಿಮಳೆಯಾಗಿದೆ.15 ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್‌ಎಫ್) ಸಿಬ್ಬಂದಿ ಇದ್ದ ಬಸ್ ಪೊಲೀಸ್ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದೆ. ಭಯೋತ್ಪಾದಕರು ಹಲವಾರು ಸುತ್ತುಗಳ ವಿವೇಚನೆಯಿಲ್ಲದ ಗುಂಡಿನ ದಾಳಿ ನಡೆದಿದೆ.

ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಜಮ್ಮು ಪ್ರದೇಶದ ಸಾಂಬಾಗೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಎರಡು ದಿನಗಳ ಮೊದಲು ಭಯೋತ್ಪಾದಕ ದಾಳಿ ನಡೆದಿದೆ. ಎನ್‌ಕೌಂಟರ್ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಮಹಾನಿರ್ದೇಶಕ ದಿಲ್‌ಬಾಗ್ ಸಿಂಗ್, ಇಬ್ಬರು ಭಯೋತ್ಪಾದಕರು ಪಾಕಿಸ್ತಾನ ಮೂಲದ ಜೆಎಂನ ಆತ್ಮಹತ್ಯಾ ದಳದ ಭಾಗವಾಗಿದ್ದರು ಮತ್ತು ಅವರ ಒಳನುಸುಳುವಿಕೆಯು ಪ್ರಧಾನಿ ಭೇಟಿಯನ್ನು ಹಾಳುಮಾಡಲು “ದೊಡ್ಡ ಪಿತೂರಿ” ಆಗಿರಬಹುದು ಎಂದು ಹೇಳಿದ್ದಾರೆ.
ಭಯೋತ್ಪಾದಕರು ಆತ್ಮಹತ್ಯಾ ಉಡುಪುಗಳನ್ನು ಧರಿಸಿದ್ದರು ಮತ್ತು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಹ ಹೊಂದಿದ್ದರು. ಅವರಿಂದ ಮೂರು ಶಸ್ತ್ರಾಸ್ತ್ರಗಳು ಮತ್ತು ಬಹಳಷ್ಟು ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಮ್ಮುವಿನ ಸುಂಜ್ವಾನ್ ಸೇನಾ ಶಿಬಿರದ ಮೇಲೆ ಉಗ್ರರು ನಡೆಸಿದ ದಾಳಿಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಹಿಸಿಕೊಳ್ಳಲಿದೆ.

ಪ್ರಮುಖ ಸುದ್ದಿ :-   ನಟಿ ಸಿದ್ಧಾರ್ಥ- ನಟಿ ಅದಿತಿ ರಾವ್ ಮದುವೆ ಆಗಿಲ್ಲ : ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ; ಸ್ಪಷ್ಟನೆ ನೀಡಿದ ಅದಿತಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement