ರಸ್ತೆ ಮಧ್ಯದ ಮ್ಯಾನ್‌ಹೋಲ್‌ಗೆ ಬಿದ್ದ ಫೋನಿನಲ್ಲಿ ಮಾತನಾಡುತ್ತ ಹೋಗುತ್ತಿದ್ದ ಮಹಿಳೆ…ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಿಹಾರ: ಮಹಿಳೆಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಮಾತನಾಡುತ್ತ ಬರುತ್ತಿದ್ದಾಗ ಆಕಸ್ಮಿಕವಾಗಿ ಮ್ಯಾನ್‌ಹೋಲ್‌ಗೆ ಬಿದ್ದಿರುವ ಘಟನೆ ನಡೆದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಿಹಾರದ ರಾಜಧಾನಿ ಪಟನಾದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಉತ್ಕರ್ಷ್ ಸಿಂಗ್ ಎಂಬುವವರು ಟ್ವಿಟರ್‌ನಲ್ಲಿ ಇದರ ವೀಡಿಯೊ ಹಂಚಿಕೊಂಡಿದ್ದಾರೆ.

ಮಹಿಳೆಯು ವಾಹನವೊಂದರ ಹಿಂದೆ ಫೋನ್‌ನಲ್ಲಿ ಮಾತನಾಡುತ್ತ ನಡೆದುಕೊಂಡು ಹೋಗುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಫೋನಿನಲ್ಲಿ ಮಾತನಾಡುತ್ತಿದ್ದ ಮಹಿಳೆ ರಸ್ತೆ ಮಧ್ಯದಲ್ಲಿಯೇ ಇದ್ದ ಮ್ಯಾನ್​​ಹೋಲ್​​ಗೆ ಬೀಳುತ್ತಿರುವುದುಕಾಣುತ್ತದೆ, ರಸ್ತೆ ಅಕ್ಕಪಕ್ಕದಲ್ಲಿದ್ದವರು ತಕ್ಷಣವೇ ಧಾವಿಸಿ ಮಹಿಳೆಯನ್ನು ಮ್ಯಾನ್‌ಹೋಲ್‌ನಿಂದ ಹೊರತೆಗೆದಿದ್ದಾರೆ. ಮಹಿಳೆಗೆ ಗಾಯಗಳಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement