ಅಂಕೋಲಾ: ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ವ್ಯಕ್ತಿಯೋರ್ವರು ಮೃತ ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೇಗುಳಿ ಕೃಷ್ಣಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಭವಿಸಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಅವರ್ಸಾ ನಿವಾಸಿ ಹೊಟೇಲ್ ಶಿಲ್ಪಾ ಮಾಲಕ ಗಾಂಧಿ ಶೆಟ್ಟಿ (60) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಅವರ್ಸಾದಿಂದ ಸ್ಕೂಟಿ ಮೇಲೆ ಅಂಕೋಲಾ ಕಡೆ ಬರುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ವೇಗವಾಗಿ ಬಂದ ಸ್ವಿಪ್ಟ್ ಕಾರು ಗುದ್ದಿದ ಪರಿಣಾಮ ಗಾಂಧಿ ಶೆಟ್ಟಿಯವರು ಡಿವೈಡರ್ ಮೇಲೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ತಲೆಗೆ ತೀವ್ರ ಸ್ವರೂಪ ಪಟ್ಟುಬಿದ್ದು ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ