ಚಿತ್ರದುರ್ಗ: ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಬೋಕಿಕೆರೆ ಗೇಟ್ ಬಳಿ ಭಾನುವಾರ ಮುಂಜಾನೆ ನಡೆದ ಬಗ್ಗೆ ವರದಿಯಾಗಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಮೃತರನ್ನು ಹೊನ್ನಾವರ ನಿವಾಸಿಗಳಾದ ಶ್ರೀಧರ ನಾಯ್ಕ್, ಜೀವನಕುಮಾರ್, ವಿನಾಯಕ ಎಂದು ಗುರುತಿಸಲಾಗಿದೆ. ಎಲ್ಲರೂ ತುಮಕೂರು ಗ್ಯಾಸ್ ಪೈಪ್ ಲೈನ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ.
ಮೂವರು ಕಾರ್ಮಿಕರು ಹೊನ್ನಾವರದಿಂದ ತುಮಕೂರಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಬೋಕಿಕೆರೆ ಗೇಟ್ ಬಳಿ ವಾಹನವು ಚಾಲಕನ ನಿಯಂತ್ರಣ ತಪ್ಪಿ ಹುಣಸೆ ಮರಕ್ಕೆ ಡಿಕ್ಕಿ ಹೊಡೆದಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ, ವಾಹನವು ಸಂಪೂರ್ಣ ನಜ್ಜುಗುಜ್ಜಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ