ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ, ದೇಶಕ್ಕೆ ಕೊಡುಗೆ ನೀಡಿದ ಮಹನೀಯರ ಹೆಸರನ್ನಿಡಿ: ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಬಿಎಸ್‌ವೈ ಪತ್ರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಅವರ ಅವರು ಇಡುವುದಾಗಿ ಘೋಷಣೆ ಮಾಡಿದ ನಂತರ ಈಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಇಡುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವವರಿಗೆ ಪತ್ರ ಬರೆದಿರುವ ಯಡಿಯೂರಪ್ಪ , ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ. ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಇತ್ತೀಚಿಗೆ ತಾವು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದ ಎಂದು ತಿಳಿಸಿದ್ದಾರೆ.

ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು, ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದರೆ ನನ್ನದು ಅಳಿಲು ಸೇವೆ ಮಾತ್ರವಾಗಿದೆ. ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾ ಭಾವ ನನ್ನನ್ನಲ್ಲಿದೆ. ಈ ಹಿನ್ನಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ತಮ್ಮ ಈ ನಿರ್ಧಾರ ಪುನರ್ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಯಡಿಯೂರಪ್ಪ ಕೋರಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement