ಸಹಜ ಸ್ಥಿತಿಗೆ ಹುಬ್ಬಳ್ಳಿ: ನಿಷೇಧಾಜ್ಞೆ ಹಿಂದಕ್ಕೆ

ಹುಬ್ಬಳ್ಳಿ: ಕೋಮುಗಲಭೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ನಗರದಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಭಾನುವಾರ ಹಿಂಪಡೆಯಲಾಗಿದ್ದು, ಸಹಜ ಸ್ಥಿತಿಗೆ ಮರಳಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಲಾಭು ರಾಮ್ ತಿಳಿಸಿದ್ದಾರೆ.
ಆಕ್ಷೇಪಾರ್ಹ ಪೋಸ್ಟ್‌ನ ಮೇಲೆ ದೊಡ್ಡ ಪ್ರಮಾಣದ ಹಿಂಸಾಚಾರದ ನಂತರ ಏಪ್ರಿಲ್ 16 ರಂದು ನಗರದಲ್ಲಿ ಕರ್ಫ್ಯೂ ವಿಧಿಸಲಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ವಿವಾದಾತ್ಮಕ ಪೋಸ್ಟ್‌ ಮಾಡಿದ್ದ ಯುವಕರು ಸೇರಿದಂತೆ ಕನಿಷ್ಠ 138 ಜನರನ್ನು ಬಂಧಿಸಲಾಗಿದೆ.
ಈ ಘಟನೆಯನ್ನು ರಾಜ್ಯ ಸರ್ಕಾರವು ಕೇವಲ ಸಾಮಾನ್ಯ ಹಿಂಸಾಚಾರ ಎಂದು ಪರಿಗಣಿಸಿಲ್ಲ ಮತ್ತು ಪೊಲೀಸ್ ಠಾಣೆಯ ಮೇಲಿನ ಸಂಚು ಮತ್ತು ಯೋಜಿತ ದಾಳಿಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಘಟನೆಯ ಹಿಂದಿರುವ ಸಂಘಟನೆಗಳು, ವ್ಯಕ್ತಿಗಳನ್ನು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement