ತರಗತಿಯಲ್ಲೇ ಶರ್ಟ್‌ ಬಿಚ್ಚಿ ಶಿಕ್ಷಕರಿಗೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ವಿದ್ಯಾರ್ಥಿಗಳು…ವೀಡಿಯೊ ವೈರಲ್‌ ಆದ ನಂತರ ಮೂವರ ಅಮಾನತು…ವೀಕ್ಷಿಸಿ

ತಿರುಪತ್ತೂರು: ಶಾಲಾ ಶಿಕ್ಷಕರಿಗೆ ತರಗತಿಯಲ್ಲಿ ವಿದ್ಯಾರ್ಥಿಗಳು ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳನ್ನು ಅಧಿಕಾರಿಗಳು ಅಮಾನತುಗೊಳಿಸಿದ್ದಾರೆ. ಅಂಬೂರು ಸಮೀಪದ ಮಾದನೂರು ಸರ್ಕಾರಿ ಶಾಲೆಯ 18 ವರ್ಷದ ವಿದ್ಯಾರ್ಥಿಯೊಬ್ಬ ಪ್ರಾಣಿಶಾಸ್ತ್ರ ಶಿಕ್ಷಕ ಸಂಜಯ್ ಗಾಂಧಿಗೆ ಬೆದರಿಕೆ ಹಾಕಿದ್ದಲ್ಲದೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಕ್ಯಾಮರಾದಲ್ಲಿ ಸೆರೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಮೂವರು ವಿದ್ಯಾರ್ಥಿಗಳು ಕ್ಲಾಸ್‌ರೂಂನಲ್ಲಿ ಅಸಭ್ಯವಾಗಿ ನಡೆದುಕೊಂಡು ಶಿಕ್ಷಕರೊಬ್ಬರ ಮೇಲೆ ಹಲ್ಲೆಗೆ ಯತ್ನಿಸಿರುವ ಆಘಾತಕಾರಿ ಘಟನೆ ತಮಿಳುನಾಡಿನ ತಿರುಪತ್ತೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದ ವಿಡಿಯೊ ವೈರಲ್ ಆಗಿದ್ದು, ವಿದ್ಯಾರ್ಥಿಗಳ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಮಾದನೂರ್ ಎಂಬ ಗ್ರಾಮದ ಸರ್ಕಾರಿ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಪಾಠ ನಡೆಯುತ್ತಿರುವಾಗ ಸಂಜಯ್ ಗಾಂಧಿ ಎನ್ನುವ ಶಿಕ್ಷಕರೊಬ್ಬರು 12 ನೇ ತರಗತಿ ಮಕ್ಕಳಿಗೆ ಪಾಠ ಮಾಡುತ್ತಿದ್ದರು. ಈ ವೇಳೆ ಮಾರಿ ಎನ್ನುವ ಹುಡುಗ ನಿದ್ದೆ ಮಾಡುತ್ತಿದ್ದದ್ದನ್ನು ಶಿಕ್ಷಕ ಗಾಂಧಿ ಪ್ರಶ್ನಿಸಿದ್ದರು.
ಇದಕ್ಕೆ ಕುಪಿತಗೊಂಡ ಮಾರಿ ಹಾಗೂ ಆತನ ಸಂಗಡಿಗರು ಕ್ಲಾಸ್ ರೂಂನಲ್ಲೇ ಬಟ್ಟೆ ಬಿಚ್ಚಿ ಶಿಕ್ಷಕ ಗಾಂಧಿ ಅವರಿಗೆ ಧಮಕಿ ಹಾಕಿದ್ದಾರೆ ಹಾಗೂ ಹಲ್ಲೆಗೂ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.
ಈ ಘಟನೆ ಕಳೆದ ಮಂಗಳವಾರ ನಡೆದಿದೆ ಎನ್ನಲಾಗಿದ್ದು, ತರಗತಿಯಲ್ಲಿ ಇತರ ಇಬ್ಬರು ವಿದ್ಯಾರ್ಥಿಗಳು ತಮ್ಮ ಫೋನ್‌ಗಳಲ್ಲಿ ಘಟನೆಯನ್ನು ರೆಕಾರ್ಡ್ ಮಾಡಿದ ನಂತರ ಕ್ಲಿಪ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

ಪ್ರಮುಖ ಸುದ್ದಿ :-   ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

ಈ ಕುರಿತು ವಾಣಿಯಂಬಾಡಿ ಕಂದಾಯ ವಿಭಾಗದ ಅಧಿಕಾರಿ (ಆರ್‌ಡಿಒ) ಗಾಯತ್ರಿ ಸುಬ್ರಮಣಿ ಅವರು, ಅಂಬೂರು ತಹಶೀಲ್ದಾರ್ ಪಳನಿ ಮತ್ತು ಶಾಲಾ ಮುಖ್ಯ ಶಿಕ್ಷಕ ಪಿ.ವೇಲನ್ ಗುರುವಾರ ವಿಚಾರಣೆ ನಡೆಸಿದರು. ಘಟನೆಗೆ ಸಹಾಯ ಮಾಡಿದ ಮತ್ತು ಚಿತ್ರೀಕರಿಸಿದ ವಿದ್ಯಾರ್ಥಿ ಮತ್ತು ಇಬ್ಬರು ಸ್ನೇಹಿತರನ್ನು ತಪ್ಪನ್ನು ಒಪ್ಪಿಕೊಂಡ ನಂತರ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಪೋಷಕರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ವಿದ್ಯಾರ್ಥಿಗಳು ಶಿಕ್ಷಕರಿಗೆ ಕ್ಷಮಾಪಣೆ ಪತ್ರವನ್ನು ಸಲ್ಲಿಸಬೇಕು. ಶಿಕ್ಷಕರು ಅನುಮತಿಸಿದರೆ, ವಿದ್ಯಾರ್ಥಿಗಳು ಮತ್ತೆ ಶಾಲೆಗೆ ಸೇರಬಹುದು ಇಲ್ಲದಿದ್ದರೆ ಅವರನ್ನು ಶಾಲೆಯಿಂದ ತೆಗೆದುಹಾಕಲಾಗುತ್ತದೆ ಎಂದು ಅಧಿಕೃತ ಪತ್ರಿಕಾ ಸಂವಹನ ಹೇಳಿದೆ.
ಘಟನೆಯ ಕುರಿತು ತಿರುಪತ್ತೂರು ಜಿಲ್ಲಾಧಿಕಾರಿ ಅಮರ್ ಖುಷ್ವಾಹಾ ಅವರಿಗೆ ವರದಿ ಸಲ್ಲಿಸಲಾಗಿದೆ. ಈ ಹಿಂದೆ, ವೆಲ್ಲೂರು ಪ್ರದೇಶದ ಹಲವು ಶಿಕ್ಷಕರು ಶಾಲಾ ಆಡಳಿತ ಸಮಿತಿ (SMC) ಸಭೆಗಳಲ್ಲಿ ವಿದ್ಯಾರ್ಥಿಗಳ ವರ್ತನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

ಪ್ರಮುಖ ಸುದ್ದಿ :-   ರೈಲು ನಿಲ್ದಾಣದಲ್ಲಿ ವ್ಯಕ್ತಿಯ ಸಾವಿನ ರಹಸ್ಯ ಭೇದಿಸಿದ ರೈಲು ಪ್ರಯಾಣಿಕನ ಮೊಬೈಲ್‌ ಸೆಲ್ಫಿ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement