ಪಿಎಸ್‌ಐ ಪರೀಕ್ಷೆ ಅಕ್ರಮ: ದಾಖಲೆಗೊಂದಿಗೆ ಬನ್ನಿ ಎಂದು ಪ್ರಿಯಾಂಕ್‌ ಖರ್ಗೆಗೆ ಸಿಐಡಿ ನೋಟಿಸ್‌

posted in: ರಾಜ್ಯ | 0

ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಸಿಐಡಿ ವಿಶೇಷ ಘಟಕವು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಅವರಿಗೆ ಭಾನುವಾರ ನೋಟಿಸ್‌ ಜಾರಿ ಮಾಡಿದ್ದು, ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಏಪ್ರಿಲ್‌ 25ರಂದು ಸೂಕ್ತ ದಾಖಲಾತಿಗಳೊಂದಿಗೆ ವಿಚಾರಣೆಗೆ ಹಾಜರಾಗಿ ಎಂದು ಸೂಚನೆ ನೀಡಿದೆ.

ಸೋಮವಾರ ಬೆಳಗ್ಗೆ 11:30ಕ್ಕೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿಯ ಹಿರಿಯ ಪೊಲೀಸ್‌ ಅಧಿಕಾರಿ ನರಸಿಂಹಮೂರ್ತಿ ಪಿ. ಅವರು ಸೂಚನೆ ನೀಡಿದ್ದಾರೆ.
545 ಪಿಎಸ್‌ಐ (ಸಿವಿಲ್‌) ಅಕ್ರಮ ನೇಮಕಾತಿ ಹಗಣಕ್ಕೆ ಸಂಬಂಧಿಸಿದಂತೆ ತಾವು ಕೆಲವು ದಾಖಲಾತಿಗಳನ್ನು ಮಾಧ್ಯಮಗಳಿಗೆ ನೀಡಿದ್ದೀರಿ. ಈ ಪ್ರಕರಣ ಸೂಕ್ಷ್ಮ ಹಾಗೂ ಗಂಭೀರವಾಗಿದ್ದು, ಲಭ್ಯವಿರುವ ಎಲ್ಲ ದಾಖಲಾತಿಗಳನ್ನು ಸಂಗ್ರಹಿಸಿ ತನಿಖೆ ನಡೆಸಬೇಕಾಗಿರುವ ಹಿನ್ನೆಲೆಯಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಹುಚ್ಚು ಸಾಹಸ...ಶ್ರೀನಿವಾಸ ಸಾಗರ ಅಣೆಕಟ್ಟಿನ ಗೋಡೆ ಹತ್ತುವಾಗ 30 ಅಡಿ ಎತ್ತರದಿಂದ ಬಿದ್ದ ಯುವಕ | ದೃಶ್ಯ ವೀಡಿಯೊದಲ್ಲಿ ಸೆರೆ
advertisement

ನಿಮ್ಮ ಕಾಮೆಂಟ್ ಬರೆಯಿರಿ