ರಾಮನಗರ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಸ್ಥಳದಲ್ಲೇ ಇಬ್ಬರು ಸಾವಿಗೀಡಾದ ಘಟನೆ ರಾಮನಗರದ ಕುಂಭಾಪುರ ಗೇಟ್ ಬಳಿ ಸೋಮವಾರ ಬೆಳಗ್ಗೆ 6ರ ಸುಮಾರಿಗೆ ಸಂಭವಿಸಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಮೃತರನ್ನುಸುಂದರೇಶ (49) ಮತ್ತು ತನ್ಮಯ್ (9) ಎಂದು ಗುರುತಿಸಲಾಗಿದೆ. ಅಲ್ಲದೆ ಶೀಲ, ಗಾನವಿ, ಸಾನವಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದೇ ಕುಟುಂಬದ ಐವರು ಬೆಂಗಳೂರಿನಿಂದ ಮಂಡ್ಯ ಜಿಲ್ಲೆ ಮಳವಳ್ಳಿ ಬಳಿಯ ಅಗಸನ ಪುರಕ್ಕೆ ಹಬ್ಬಕ್ಕೆಂದು ಹೋದವರು ವಾಪಸ್ ಬೆಂಗಳೂರಿಗೆ ಒಮಿನಿ ಕಾರಿನಲ್ಲಿ ಬರುತ್ತಿರಿವಾಗ ಮಾರ್ಗಮಧ್ಯೆ ಕಾರಿನ ಮೇಲೆ ಮರ ಬಿದ್ದಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ