ಮಾಸ್ಕ್‌ ಧರಿಸುವುದು ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ಬೀಳುತ್ತೆ ದಂಡ: ರಾಜ್ಯ ಸರ್ಕಾರದಿಂದ ಹೊಸ ಆದೇಶ

ಬೆಂಗಳೂರು: ಕೋವಿಡ್ ನಾಲ್ಕನೇ ಅಲೆಯ ಭೀತಿಯ ನಡುವೆ ರಾಜ್ಯ ಸರ್ಕಾರ ಸೋಮವಾರ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟಿಸಿದೆ.
ಕೋವಿಡ್ ನಾಲ್ಕನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಏಪ್ರಿಲ್ 27 ರಂದು ಕೋವಿಡ್ ಹೆಚ್ಚಿರುವ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ.

ಇಂದು, ಸೋಮವಾರ ಮಧ್ಯಾಹ್ನ ಮುಖ್ಯಮಂತ್ರಿ ಬೊಮ್ಮಾಯಿ ಆಧ್ಯಕ್ಷತೆಯಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆ ನಡೆಸಿದ ನಂತರ ಹೊಸ ಕೋವಿಡ್ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ದೆಹಲಿ, ಹರಿಯಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ದೈನಂದಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಕರ್ನಾಟಕದಲ್ಲೂ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಸರ್ಕಾರ ತಿಳಿಸಿದೆ. ಒಂದು ಪೂರ್ವಭಾವಿ ಹೆಜ್ಜೆಯಾಗಿ ಕೋವಿಡ್ ಪ್ರಕರಣಗಳ ಏರಿಕೆಯನ್ನ ಕಡಿಮೆ ಮಾಡಲು ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ವ್ಯಕ್ತಿಗಳು ಮಾಸ್ಕ್‌ ಧರಿಸುವುದು ಕಡ್ಡಾಯವಾಗಿದೆ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ 2 ಅಡಿಗಳ ಅಂತರ ಕಾಯ್ದುಕೊಳ್ಳಬೇಕು ಎಂದು ಸರ್ಕಾರದ ಆದೇಶ ತಿಳಿಸಿದೆ.

ಹೊಸ ಮಾರ್ಗಸೂಚಿಗಳು:

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ
ಸಾರ್ವಜನಿಕ ಸ್ಥಳದಲ್ಲಿ ದೈಹಿಕ ಅಂತರ ಪಾಲನೆ ಕಡ್ಡಾಯ
ಪ್ರಯಾಣದ ವೇಳೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು
ಕರ್ತವ್ಯದ ವೇಳೆ ಮಾಸ್ಕ್ ಧರಿಸಿ ನಿಯಮ ಪಾಲನೆ ಮಾಡಬೇಕು
ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡ ವಿಧಿಸಲಾಗುತ್ತದೆ.
ಸಾಮಾಜಿಕ ಅಂತರ ಕಾಪಾಡಬೇಕು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement