ಫ್ರಾನ್ಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ಇಮ್ಯಾನುಯೆಲ್ ಮ್ಯಾಕ್ರನ್ ಅಭಿನಂದಿಸಿದ ಪ್ರಧಾನಿ ಮೋದಿ

ನವದೆಹಲಿ: ಫ್ರಾನ್ಸ್ ಅಧ್ಯಕ್ಷರಾಗಿ ಪುನರಾಯ್ಕೆಯಾಗಿರುವ ಇಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಪ್ರಧಾನಿ ಮೋದಿ ಸೋಮವಾರ ಬೆಳಿಗ್ಗೆ ಅಭಿನಂದಿಸಿದ್ದಾರೆ.
ತಮ್ಮ ಟ್ವೀಟ್‌ನಲ್ಲಿ, “ಫ್ರಾನ್ಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ನನ್ನ ಸ್ನೇಹಿತ ಇಮ್ಯಾನುಯೆಲ್ ಮ್ಯಾಕ್ರಾನ್ ಅವರಿಗೆ ಅಭಿನಂದನೆಗಳು. ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಗಾಢಗೊಳಿಸಲು ಒಟ್ಟಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ” ಎಂದು ಪ್ರಧಾನಿ ಮೋದಿ ಟ್ವಟ್ಟರಿನಲ್ಲಿ ಬರೆದಿದ್ದಾರೆ.

ಭಾನುವಾರ, ಫ್ರಾನ್ಸ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಬಲಪಂಥೀಯ ಪ್ರತಿಸ್ಪರ್ಧಿ ಮರೀನ್ ಲೆ ಪೆನ್ ಅವರ ವಿರುದ್ಧ ಪ್ರಚಂಡ ಜಯಭೇರಿ ಭಾರಿಸಿ ಮರು ಆಯ್ಕೆಗೊಂಡಿದ್ದಾರೆ.
97%ರಷ್ಟು ಮತಗಳನ್ನು ಎಣಿಕೆ ಮಾಡಲಾಗಿದ್ದು, ಮ್ಯಾಕ್ರನ್ ಅವರು 57.4% ಮತಗಳನ್ನು ಗಳಿಸುವ ಹಾದಿಯಲ್ಲಿದ್ದಾರೆ ಎಂದು ಆಂತರಿಕ ಸಚಿವಾಲಯದ ಅಂಕಿಅಂಶಗಳು ತೋರಿಸಿವೆ.

ತಮ್ಮ ವಿಜಯದ ಭಾಷಣದಲ್ಲಿ ಮ್ಯಾಕ್ರಾನ್‌, “ಈ ದೇಶದ ಅನೇಕರು ನನಗೆ ಮತ ಹಾಕಿದ್ದಾರೆ ಅವರು ನನ್ನ ಆಲೋಚನೆಗಳನ್ನು ಬೆಂಬಲಿಸುವ ಕಾರಣದಿಂದಲ್ಲ, ಆದರೆ ಬಲಪಂಥೀಯರನ್ನು ದೂರವಿಡಲು. ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಮತ್ತು ಮುಂಬರುವ ವರ್ಷಗಳಲ್ಲಿ ನಾನು ಅವರಿಗೆ ಋಣಿಯಾಗಿದ್ದೇನೆ ಎಂದು ಹೇಳಿದ್ದಾರೆ.
ಮ್ಯಾಕ್ರನ್ ಅವರನ್ನು ವಿಶ್ವ ನಾಯಕರು ಅಭಿನಂದಿಸಿದ್ದಾರೆ. ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚಾರ್ಲ್ಸ್ ಮೈಕೆಲ್, ಟ್ವಿಟ್ಟರ್ನಲ್ಲಿ “ಈ ಪ್ರಕ್ಷುಬ್ಧ ಅವಧಿಯಲ್ಲಿ, ನಮಗೆ ಘನ ಯುರೋಪ್ ಮತ್ತು ಫ್ರಾನ್ಸ್ ಹೆಚ್ಚು ಸಾರ್ವಭೌಮ ಮತ್ತು ಹೆಚ್ಚು ಕಾರ್ಯತಂತ್ರದ ಯುರೋಪಿಯನ್ ಒಕ್ಕೂಟಕ್ಕೆ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಬರೆದಿದ್ದಾರೆ.
ಚುನಾವಣಾ ವಿಜಯಕ್ಕಾಗಿ ಅಧ್ಯಕ್ಷ ಮತ್ತು ನಿಜವಾದ ಸ್ನೇಹಿತ ಮ್ಯಾಕ್ರಾನ್‌ ಅವರಿಗೆ ಅಭಿನಂದನೆಗಳು” ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸೋಮವಾರ ಮುಂಜಾನೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದಿದ್ದಾರೆ.

ಪ್ರಮುಖ ಸುದ್ದಿ :-   ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement