ಕೇಜ್ರಿವಾಲ್​ ನಿವಾಸದ ಮೇಲೆ ದಾಳಿ ಪ್ರಕರಣ: ತೇಜಸ್ವಿ ಸೂರ್ಯಗೆ ನೋಟಿಸ್​, ಠಾಣೆಗೆ ಹಾಜರಾಗುವಂತೆ ಸೂಚನೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲಿನ ದಾಳಿ ಪ್ರಕರಣದ ತನಿಖೆಗೆ ಹಾಜರಾಗುವಂತೆ ದೆಹಲಿ ಪೊಲೀಸರು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಏಪ್ರಿಲ್ 28 ರಂದು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ತನಿಖಾಧಿಕಾರಿ ಮುಂದೆ ಹಾಜರಾಗಲು ಆದೇಶಿಸಲಾಗಿದೆ. ಈಗಾಗಲೇ ಮಾಜಿ ಮೇಯರ್ ಜಯಪ್ರಕಾಶ್ ಹಾಗೂ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ವಾಸು ರುಖ್ದ್ ಸೇರಿದಂತೆ 10 ಆರೋಪಿಗಳನ್ನು ಬಂಧಿಸಲಾಗಿದೆ.

ಬೆಂಗಳೂರು ದಕ್ಷಿಣದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಪ್ರತಿಭಟನೆ ಸ್ಥಳಕ್ಕೆ ತಲುಪಿದ ನಂತರ ಕೇಜ್ರಿವಾಲ್ ಅವರ ನಿವಾಸದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ನಂತರ ಗೇಟ್ ಅನ್ನು ಧ್ವಂಸಗೊಳಿಸಲಾಯಿತು ಎಂದು ಆರೋಪಿಸಲಾಗಿದೆ.

ಬೂಮ್ ಬ್ಯಾರಿಯರ್ ಮತ್ತು ಸಿಸಿಟಿವಿ ಒಡೆದಿದ್ದಲ್ಲದೇ, ಮುಖ್ಯ ಗೇಟ್‌ಗೆ ಬಣ್ಣ ಎರಚಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಸಿವಿಲ್ ಲೈನ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು 8 ಆರೋಪಿಗಳನ್ನು ಬಂಧಿಸಿದ್ದರು. ಸುಮಾರು ಎರಡು ವಾರಗಳ ಕಾಲ ಜೈಲಿನಲ್ಲಿ ಕಳೆದ ನಂತರ ಅವರಿಗೆ ಜಾಮೀನು ನೀಡಲಾಯಿತು.
ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಸುಳ್ಳು ಎಂದು ಕೇಜ್ರಿವಾಲ್ ಹೇಳಿಕೆ ನೀಡಿದ ಮೇಲೆ ಪ್ರತಿಭಟನೆ ನಡೆದಿದೆ. ದೆಹಲಿ ಅಸೆಂಬ್ಲಿಯಲ್ಲಿ ಮಾಡಿದ ಭಾಷಣದಲ್ಲಿ ಅವರು ಕಾಶ್ಮೀರ ಫೈಲ್ಸ್ ಪ್ರಚಾರಕ್ಕಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಓದಿರಿ :-   ಬಂದೂಕು ಹಿಡಿದು ಚುನಾವಣಾ ಪ್ರಚಾರ...! ದೃಶ್ಯ ಮೊಬೈಲ್‌ನಲ್ಲಿ ಸೆರೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ