ಗರ್ಭಕೋಶ ಶಸ್ತ್ರಚಿಕಿತ್ಸೆಗೊಳಗಾದ ಮಹಿಳೆಯರಿಂದ ಪರಿಹಾರಕ್ಕೆ ಆಗ್ರಹಿಸಿ ಸಿಎಂ ನಿವಾಸದ ವರೆಗೆ ಪಾದಯಾತ್ರೆ

ಹಾವೇರಿ: ಹೊಟ್ಟೆ ನೋವುಎಂದು ಆಸ್ಪತ್ರೆಗೆ ಹೋದರೆ ವೈದರೊಬ್ಬರು ಗರ್ಭಕೋಶ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯರು ನಿನ್ನೆಯಿಂದ (ಏಪ್ರಿಲ್ 25) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆ ವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ.
ರಾಣೆಬೆನ್ನೂರು ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನಾಗಿದ್ದ ಡಾ.ಪಿ.ಶಾಂತ 1,522 ಮಹಿಳೆಯರಿಗೆ ಗರ್ಭಕೋಶ ಶಸ್ತ್ರಚಿಕಿತ್ಸೆ ಮಾಡಿದ್ದಾರಂತೆ. ನಂತರ ಹಲವು ರೀತಿಯ ತೊಂದರೆಗೆ ಸಿಲುಕಿದ ಮಹಿಳೆಯರು ಸರ್ಕಾರ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಹೋರಾಟ ಮಾಡುತ್ತಿದ್ದಾರೆ. ಬಿಸಿಲನ್ನೂ ಲೆಕ್ಕಿಸದೆ ತಲೆ ಮೇಲೆ ಬಟ್ಟೆ, ಊಟದ ಗಂಟು ಇಟ್ಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾಂವಿ ನಿವಾಸದ ವರೆಗೆ ಮಹಿಳೆಯರು ಪಾದಯಾತ್ರೆ ಹೊರಟಿದ್ದಾರೆ.

ರಾಣೆಬೆನ್ನೂರು ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಕಳೆದ ಕೆಲವು ವರ್ಷಗಳ ಹಿಂದೆ ಡಾ.ಪಿ.ಶಾಂತ ಎಂಬುವವರು ಶಸ್ತ್ರಚಿಕಿತ್ಸಕರಾಗಿದ್ದರು. ಆಸ್ಪತ್ರೆಗೆ ಹೊಟ್ಟೆನೋವು ಎಂದು ಹೋದ ಗರ್ಭಕೋಶ ಶಸ್ತ್ರಚಿಕಿತ್ಸೆ ಮಾಡುತ್ತಿದ್ದರು ಎಂದು ಅವರ ವಿರುದ್ಧ ಆರೋಪಿಸಲಾಗಿದೆ. ನಂತರ ಹಲವು ರೀತಿಯ ಆರೋಗ್ಯ ಸಮಸ್ಯೆಗೆ ಒಳಗಾದ ಮಹಿಳೆಯರು ಸಂಘಟಿತರಾಗಿ ಡಾ.ಶಾಂತ ವಿರುದ್ಧ ಆರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಈ ಬಾಧಿತ ಮಹಿಳೆಯರ ಅನುಕೂಲಕ್ಕೆಂದು 40 ಕೋಟಿ ರೂ.ಗಳಷ್ಟು ಹಣವನ್ನ ಸರಕಾರ ಬಿಡುಗಡೆ ಮಾಡಿತ್ತು ,ಆದರೆ ತಾಲೂಕು ಮತ್ತು ಜಿಲ್ಲೆಯ ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗರ್ಭಕೋಶ ಶಸ್ತ್ರಚಿಕಿತ್ಸೆ ಬಗ್ಗೆ ದೃಢೀಕರಣ ಪತ್ರ ಸಿಗದ ಕಾರಣ ಹಣ ವಾಪಸ್ ಹೋಗಿದೆ ಎಂದು ಈ ಮಹಿಳೆಯರು ಆರೋಪಿಸಿದ್ದಾರೆ.
ನಂತರದ ದಿನಗಳಲ್ಲಿ ಮಹಿಳೆಯರು ಹೋರಾಟದ ಮೂಲಕ ಗರ್ಭಕೋಶ ಶಸ್ತ್ರಚಿಕಿತ್ಸೆ ಆಗಿರುವ ಬಗ್ಗೆ ಆರೋಗ್ಯ ಇಲಾಖೆಯಿಂದ ದೃಢೀಕರಣ ಪತ್ರ ಪಡೆದುಕೊಂಡಿದ್ದಾರೆ. ಆದರೆ ಈವರೆಗೆ ಪರಿಹಾರ ಸಿಕ್ಕಿಲ್ಲ. ಹೀಗಾಗಿ ಗರ್ಭಕೋಶ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಶಿಗ್ಗಾಂವಿ ನಿವಾಸದ ವರೆಗೆ ಪಾದಯಾತ್ರೆ ಹೊರಟಿದ್ದಾರೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ಒಟ್ಟು 75 ಕಿಮೀ ದೂರದ ಪಾದಯಾತ್ರೆ ನಡೆಸುತ್ತಿದ್ದು, ಪ್ರತಿದಿನ ೨೫ ಕಿ.ಮೀ ದೂರ ನಡೆಯಲಿದ್ದಾರೆ. ಗರ್ಭಕೋಶ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯರು ಹೆಚ್ಚು ಕೆಲಸ ಮಾಡಲು ಆಗದೆ ಪರದಾಡುತ್ತಿದ್ದಾರೆ. ಬಹುತೇಕ ಎಲ್ಲರೂ ದಿನದ ಕೂಲಿ ಕೆಲಸವನ್ನೇ ಮಾಡುವವರಾಗಿದ್ದು ತಮಗೆ ವಿಶೇಷ ಆರ್ಥಿಕ ನೆರವು ನೀಡುವಂತೆ ಆಗ್ರಹಿಸಿ ಪಾದಯಾತ್ರೆ ಹೊರಟಿದ್ದಾರೆ.
ಕಳೆದ ಎಂಟು ವರ್ಷಗಳಿಂದ ಮಾಡುತ್ತಿರುವ ಹೋರಾಟಕ್ಕೆ ಜಯ ಸಿಕ್ಕಿಲ್ಲ. ಆದರೆ, ಈ ಹೋರಾಟದಲ್ಲಿ ಮಾತ್ರ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಂದ ನಾವು ನ್ಯಾಯ ಪಡೆಯವರೆಗೆ ಮರಳುವುದಿಲ್ಲ ಎಂದು ಈ ಮಹಿಳೆಯರು ಪಟ್ಟು ಹಿಡಿದಿದ್ದಾರೆ. ತಮಗೆ ಸೂಕ್ತ ಪರಿಹಾರ ಸಿಗಬೇಕು ಮತ್ತು ಡಾ.ಶಾಂತ ಶಾಶ್ವತವಾಗಿ ವೈದ್ಯ ಸೇವೆ ಮಾಡದಂತೆ ಮಾಡಬೇಕು ಎಂದು ಈ ಮಹಿಳೆಯರು ಆಗ್ರಹಿಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement